11:29 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ

ಇತ್ತೀಚಿನ ಸುದ್ದಿ

ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

21/11/2025, 19:08

ಮಂಡ್ಯ(reporterkarnataka.com): ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ಆಯ್ಕೆಯಾದ ನಂತರ ಮಾತನಾಡಿದ ಅವರು, ಈ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೂ ಧನ್ಯವಾದ ಮುಖ್ಯ 12 ಜನ ನಿರ್ದೇಶಕರಿಗೂ ಧನ್ಯವಾದ ತಿಳಿಸಿದರು.
ಶಂಕರೇಗೌಡರು ಹಾಗೂ ಚೌಡೇಗೌಡರು ಸ್ಥಾಪಿಸಿದ ಸಂಸ್ಥೆ ಡಿಸಿಸಿ ಬ್ಯಾಂಕ್ ಅಲ್ಲಿಂದಲೂ ಉತ್ತಮ ಕೆಲಸ ಮಾಡಿಕೊಂಡು ಬರುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಜೋಗಿಗೌಡರು ಸಹ ಉತ್ತಮ ಕಾರ್ಯಗಳನ್ನು ರೂಪಿಸಿಕೊಂಡು ಬಂದಿದೆ. ಮುಂದಿನ ದಿನಗಳಲ್ಲಿ ಡಿಸಿಸಿ ಬ್ಯಾಂಕ್ ನ ಎಲ್ಲಾ ಸಿಬ್ಬಂದಿ ವರ್ಗದ ಜೊತೆ ಸಮನ್ವಯ ಸಾಧಿಸಿ ಉತ್ತಮ ಕೆಲಸ ಮಾಡಲಾಗುವುದು ಎಂದರು.
ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ನರೇಂದ್ರ ಸ್ವಾಮಿಯವರು ಮಾತನಾಡಿ, ಮೊದಲೇ ಬಾರಿಗೆ ಹೆಚ್ಚಿನ ಬಹುಮತ ಪಡೆದು ಒಮ್ಮತ ನಿರ್ಧಾರಕ್ಕೆ ಬಂದು ಒಗ್ಗಟ್ಟನ್ನು ಸಾಧಿಸಿದ್ದೇವೆ. ಈ ಒಗ್ಗಟ್ಟು ಸಾಧಿಸು ಸಹಕಾರಿಯಾದ ಎಲ್ಲಾ ನಾಯಕರಿಗೆ ಇದರ ಕೀರ್ತಿ ಸಲ್ಲುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಸಹಕಾರಿಗಳಿಗೆ, ರೈತ ಪರ ಚಿಂತನೆಯ ಜೊತೆಗೆ ಕೈಗಾರಿಕೆಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತದೆ. ಡಿಸಿಸಿ ಬ್ಯಾಂಕ್ ನ ನೂತನವಾಗಿ ಅಧ್ಯಕ್ಷ ಸಚಿನ್ ಹಾಗೂ ಉಪಾಧ್ಯಕ್ಷರಾದ ಚಲುವರಾಜ್ ಅವರಿಗೆ ಅಭಿನಂದನೆ ತಿಳಿಸಿದರು.


ಉಪವಿಭಾಗಾಧಿಕಾರಿ ಶಿವಮೂರ್ತಿ ಅವರು ಮಾತನಾಡಿ ಅಧ್ಯಕ್ಷ ಸ್ಥಾನಕ್ಕೆ ಸಚಿನ್ ಸಿ. ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚಲುವರಾಜ್ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರವನ್ನು ಪರಿಶೀಲಿಸಿ ನಾಮಪತ್ರವನ್ನು ಅಂಗೀಕರಿಸಲಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿರುವುದರಿಂದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ 5 ವರ್ಷದ ಅವಧಿ ಅಧ್ಯಕ್ಷರಾಗಿ ಸಚಿನ್ ಮತ್ತು ಉಪಾಧ್ಯಕ್ಷರಾಗಿ ಚೆಲುವರಾಜ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು