8:13 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಬೆಂಗ್ರೆ-ತಣ್ಣೀರುಬಾವಿ ಪರಿಸರದ ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ ಕಾನೂನು ತೊಡಕು: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

21/11/2025, 19:14

ಮಂಗಳೂರು(reporterkarnataka.com): ಬೆಂಗ್ರೆ-ತಣ್ಣೀರುಬಾವಿ ಪರಿಸರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಇಲ್ಲಸಲ್ಲದ ನೂತನ ನಿಯಮದಿಂದಾಗಿ ಅನೇಕ ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲೆಯಲ್ಲಿ ಬದುಕು ನಡೆಸುವಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕೇವಲ ಹಕ್ಕುಪತ್ರಗಳನ್ನು ಹೊಂದಿರುವ ಈ ಪ್ರದೇಶದಲ್ಲಿ ಕಳೆದ ಅನೇಕ ವರ್ಷಗಳಿಂದ ಯಾವುದೇ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಗ್ರಾಮ ಲೆಕ್ಕಾಧಿಕಾರಿಗಳು ನೀಡುವ ವಾಸ್ತವ್ಯ ದೃಢೀಕರಣ ಪತ್ರವೇ ಸಾಕಿತ್ತು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಅದೇ ನಿಯಮವಿದ್ದು ಸ್ಥಳೀಯರಿಗೆ ಯಾವುದೇ ತೊಂದರೆಯಾಗಿರಲಿಲ್ಲ. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ನಿಯಮಗಳ ಪ್ರಕಾರ ವಾಸ್ತವ್ಯ ದೃಢೀಕರಣ ಪತ್ರ ಮಾತ್ರವಲ್ಲದೇ, ಈ ಪ್ರದೇಶಕ್ಕೆ ಲಭ್ಯವಿರದ ಇತರೆ ದಾಖಲೆ ಪತ್ರಗಳನ್ನೂ ಸಹ ಹಾಜರುಪಡಿಸುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ವಿದ್ಯುತ್ ಸಂಪರ್ಕ ಇಲ್ಲ ಎನ್ನುತ್ತಿರುವುದು ಸ್ಥಳೀಯರಿಗೆ ಇನ್ನಿಲ್ಲದ ತಲೆ ನೋವಾಗಿದೆ ಎಂದರು.
ವಿದ್ಯುತ್ ಸಂಪರ್ಕವು ಮೂಲಭೂತ ಸೌಕರ್ಯವಾಗಿದ್ದು ರಾಜ್ಯ ಸರ್ಕಾರದ ಎಡವಟ್ಟಿನಿಂದಾಗಿ ಮೆಸ್ಕಾಂನವರಿಗೆ ಸಂಪರ್ಕ ನೀಡಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಕಳೆದ ಕೆಲವಾರು ತಿಂಗಳಿನಿಂದ ಇಲ್ಲಿನ ನೂರಾರು ಮನೆಗಳು ಕತ್ತಲೆಯಲ್ಲಿ ಬದುಕುವಂತಾಗಿದೆ. ಈ ಬಗ್ಗೆ ಸ್ಥಳೀಯರು ನೋವು ತೋಡಿಕೊಂಡಿದ್ದು ಕೂಡಲೇ ಹಿಂದಿನಂತೆಯೇ ಕ್ರಮ ವಹಿಸುವಂತೆ ಸ್ಥಳೀಯರ ಪರವಾಗಿ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು