ಇತ್ತೀಚಿನ ಸುದ್ದಿ
Crime News | ವೇಣೂರು: ಬೈಕ್ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
21/11/2025, 20:11
ಬೆಳ್ತಂಗಡಿ(reporterkarnataka.com): ವೇಣೂರು ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.



ಬಂಧಿತ ಆರೋಪಿಗಳನ್ನು ವೇಣೂರು ನಿವಾಸಿ ಮಹಮ್ಮದ್ ಇರ್ಷಾದ್ (25) ಹಾಗೂ ಪಡಂಗಡಿ ನಿವಾಸಿ ಸಾದಿಕ್ ಖಾನ್ (26) ಎಂದು ಗುರುತಿಸಲಾಗಿದೆ.
*ಘಟನೆ ವಿವರ:*
ಬೆಳ್ತಂಗಡಿಯ ಕುಕ್ಕೇಡಿ ನಿವಾಸಿ ಸಂಪತ್ ಕುಮಾರ್ ಎಂಬವರು ನವೆಂಬರ್ 10ರಂದು ರಾತ್ರಿ ವೇಣೂರು ಠಾಣಾ ವ್ಯಾಪ್ತಿಯ ಪಾನೂರು ಶ್ರೀ ಗುರುನಾರಾಯಣ ವೃತ್ತದ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೋಟಾರು ಸೈಕಲ್ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 88/2025 ಕಲಂ 303 (2) ಬಿ.ಎನ್. ಎಸ್. 2023 ರಂತೆ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಅರೋಪಿಗಳಾದ ವೇಣೂರು ನಿವಾಸಿ ಮಹಮ್ಮದ್ ಇರ್ಷಾದ್ ಹಾಗೂ ಪಡಂಗಡಿ ನಿವಾಸಿ ಸಾದಿಕ್ ಖಾನ್ ಎಂಬವರುಗಳನ್ನು ದಸ್ತಗಿರಿ ಮಾಡಿದ್ದರು.
ಕಳವಾದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿತರ ಪತ್ತೆಗಾಗಿ ಬೆಳ್ತಂಗಡಿ ಡಿವೈಎಸ್ ಪಿ
ರೋಹಿಣಿ ಸಿ.ಕೆ. ಅವರ ನಿರ್ದೇಶನದಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಬಿ.ಜಿ. ಸುಬ್ಬಾಪೂರ ಮಠ ಅವರ ಮಾರ್ಗದರ್ಶನದಂತೆ, ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್ ಡವಗಿ, ಓಮನ ಎನ್. ಹಾಗೂ ಎ.ಎಸ್. ಐ. ವೆಂಕಟೇಶ್ ನಾಯ್ಕ, ಹಚ್ ಸಿ. ಕೃಷ್ಣ, ಹೆಚ್ ಸಿ ಕೇಶವತಿ, ಪಿಸಿ
ಬಸವರಾಜ್, ಪಿಸಿ ಮೋಹನ್ ರವರನ್ನೊಳಗೊಂಡ ತಂಡ ಕಾರ್ಯಚರಣೆ ನಡೆಸಿತ್ತು.













