3:59 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

JDS | ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಪುನರಾಯ್ಕೆ

22/11/2025, 18:19

*ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಅವಿರೋಧ ಆಯ್ಕೆ*

*ಮಂಡಳಿ ಸಭೆಯ ನಂತರ ಆಯ್ಕೆ ವಿಷಯ ಪ್ರಕಟಿಸಿದ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು*

ಬೆಂಗಳೂರು(reporterkarnataka.com): ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ.


ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ಇಬ್ಬರು ನಾಯಕರ ಪುನರಾಯ್ಕೆ ಬಗ್ಗೆ ರಾಷ್ಟ್ರೀಯ ಪ್ರತಿನಿಧಿಗಳು ಒಮ್ಮತ ನಿರ್ಧಾರ ಕೈಗೊಂಡರು.
ರಾಷ್ಟ್ರ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿಫುಲ ಅವಕಾಶಗಳಿವೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ಬಲಿಷ್ಠವಾಗಿ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿಯೇ ಪಕ್ಷವನ್ನು ಸಂಘಟಿಸುವ ನಿರ್ಧಾರಕ್ಕೆ ರಾಷ್ಟ್ರೀಯ ಮಂಡಳಿ ಬಂದಿತು.
ಸಭೆಯ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆ ವಿವರಗಳನ್ನು ನೀಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು; ರಾಜ್ಯದ ಏಕೈಕ ಪ್ರಾದೇಶಿಕ ಪಕ್ಷ ಜೆಡಿಎಸ್ ಆಗಿದ್ದು, ಪಕ್ಷಕ್ಕೆ ಈಗ 25 ವರ್ಷ ತುಂಬಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಅವಿರತ ಶ್ರಮದಿಂದ ಪಕ್ಷ ಇವತ್ತಿಗೂ ಗಟ್ಟಿಯಾಗಿ ಉಳಿದಿದೆ. ಅಸಂಖ್ಯಾತ ಕಾರ್ಯಕರ್ತ ಪಡೆಯನ್ನು ಹೊಂದಿದೆ. ದೇವೇಗೌಡರು ಪಕ್ಷವನ್ನು ಕಟ್ಟಿ ಬೆಳೆಸಿ, ತಮ್ಮ ಬದುಕನ್ನೇ ಪಕ್ಷಕ್ಕೆ ಮೀಸಲು ಇರಿಸಿದ್ದಾರೆ. ಬೆಳ್ಳಿಹಬ್ಬದ ಸಂದರ್ಭದಲ್ಲಿ ಈ ಇಬ್ಬರು ಬಲಿಷ್ಠ ನಾಯಕರೇ ಪಕ್ಷವನ್ನು ಮುನ್ನಡೆಸಬೇಕು ಎಂದು ರಾಷ್ಟ್ರೀಯ ಮಂಡಳಿ ತೀರ್ಮಾನಿಸಿತು ಎಂದು ಅವರು ಹೇಳಿದರು.
ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ಕೈಗೊಂಡಿರುವ ಸಂಘಟನಾ ಪ್ರವಾಸ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿಯಾಗಿ ಮುಂದುವರಿದ್ದು, ಇದಕ್ಕೆ ಸಭೆಯಲ್ಲಿ ಮೆಚ್ಚಿಗೆ ದೊರೆತಿದೆ. ಎಲ್ಲಾ ನಾಯಕರು ಅವರ ಸಂಘಟನಾ ಶಕ್ತಿಯ ಬಗ್ಗೆ ಶ್ಲಾಘನೆ ಮಾಡಿದರು ಎಂದು ಸುರೇಶ್ ಬಾಬು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

*ಎರಡು ಪ್ರಮುಖ ನಿರ್ಣಯ ಅಂಗೀಕಾರ:*
ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ರೈತರ ಪರವಾಗಿ ಹಾಗೂ ಪಕ್ಷ ಸಂಘಟನೆ ಮಾಡುವ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಈ ನಿರ್ಣಯಗಳಿಗೆ ಶನಿವಾರ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕಾರ ಪಡೆಯಲಾಗುವುದು ಎಂದು ಸುರೇಶ್ ಬಾಬು ಅವರು ಹೇಳಿದರು.
ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ್, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಹೆಚ್.ಎಂ. ರಮೇಶ್ ಗೌಡ, ಜೆಡಿಎಸ್ ಐಟಿ ವಿಭಾಗದ ಅಧ್ಯಕ್ಷ ಚಂದನ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು