8:36 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

22/11/2025, 19:10

ಬೆಂಗಳೂರು(reporterkarnataka.com): ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು.
ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5 ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆ 10 ಲಕ್ಷ ಜನರ ಜೀವನ ಆಸರೆಯಾಗಿದೆ ಎಂದು ಅವರು ನುಡಿದರು.
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆ ಎಣ್ಣೆಯನ್ನು ಪ್ರತೀ ಲೀಟರ್ ಗೆ 35 ರೂ ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ.
ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್ ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು