7:24 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದ ವಿರಾಜಪೇಟೆಯ ವ್ಯಕ್ತಿಯ ಕಿಡ್ನಾಪ್; ಮಂಡ್ಯದಲ್ಲಿ ಮೂವರ ಬಂಧನ

22/11/2025, 19:20

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka@gmail.com

ಬೆಂಗಳೂರಿನ ಕೆಂಗೇರಿ ಬಳಿ ಬಸ್ ಗಾಗಿ ಕಾಯುತ್ತಿದ್ದ ವಿರಾಜಪೇಟೆ ಮೂಲದ ಅಬ್ದುಲ್ ಜಲೀಲ್ ಎಂಬಾತನನ್ನು ಕಿಡ್ನಾಪ್ ಮಾಡಿ ಹಣ, ಮೊಬೈಲ್ ದೋಚಿರುವ ಪ್ರಕರಣ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ಬಂಧಿತರನ್ನು ಕಿರಣ್, ಕುಶಾಲ್ ಬಾಬು ಮತ್ತು ಗೋಕುಲ್ ಎಂದು ಗುರುತಿಸಲಾಗಿದೆ. ಮೂವರೂ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು. ಕಾರಿನಲ್ಲಿ ಡ್ರಾಪ್ ಕೊಡುತೇವೆ ಎಂದು ಹೇಳಿ ಹತ್ತಿಸಿಕೊಂಡು, ಮಂಡ್ಯದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕುತ್ತಿಗೆಗೆ ಹಗ್ಗ ಹಾಕಿ ಬೆದರಿಸಿ ಹಣ, ಫೋನ್ ಮತ್ತು ನಗದು ದರೋಡೆ ಮಾಡುತ್ತಿದ್ದ ಗ್ಯಾಂಗ್ ಬಳಿಕ ಫೋನ್ ಪೇ ಮೂಲಕ ಹಣ ವರ್ಗಯಿಸಿಕೊಳ್ಳುತ್ತಿದ್ದರು. ಈ ಕೃತ್ಯಕ್ಕೆ ಹೊರ ರಾಜ್ಯದ ಕಾರನ್ನು ಬಾಡಿಗೆ ಪಡೆದು ದರೋಡೆ ನಡೆಸಲಾಗುತ್ತಿತ್ತು ಅಲ್ಲದೆ ಆಯಿಷಾರಾಮಿ ಜೀವನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ವಿರಾಜಪೇಟೆಯ ಜಲೀಲ್ ಮತ್ತು ಮೈಸೂರಿನ ಯತೀಂದ್ರ ಎಂಬುವವರ ಮೇಲೆ ನಡೆದ ದರೋಡೆ ಪ್ರಕರಣ ಆಧರಸಿ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು