3:26 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

22/11/2025, 19:36

ಹುಬ್ಬಳ್ಳಿ(reporterkarnataka.com): ರಾಜ್ಯದಲ್ಲಿ ಮೆಕ್ಕೆಜೋಳ ಖರೀದಿ ಮತ್ತು ಆಮದು ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಹಸಿ ಸುಳ್ಳುಗಳನ್ನೇ ಬಿತ್ತರಿಸುತ್ತ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ರಾಜ್ಯದ ರೈತರ ಹಿತರಕ್ಷಣೆ ಕಡೆಗಣಿಸಿದೆ. ಕೈಲಾಗದವರು ಮೈ ಪರಚಿಕೊಂಡರು ಎಂಬಂತೆ ತನ್ನ ಆಡಳಿತ ವೈಫಲ್ಯದಿಂದ ಕಂಗೆಟ್ಟು ಈಗ ಕೇಂದ್ರದ ಮೇಲೆ ಗೂಬೆ ಕೂರಿಸಲು ನೋಡುತ್ತಿದೆ ಎಂದು ನೇರ ವಾಗ್ದಾಳಿ ನಡೆಸಿದರು.
ಮೆಕ್ಕೆಜೋಳ ಖರೀದಿ, ಎಥೆನಾಲ್ ಉತ್ಪಾದನೆ ಮತ್ತು ಬೆಂಬಲ ಬೆಲೆ ನೀಡುವಲ್ಲಿ ರಾಜ್ಯ ಸರ್ಕಾರ ತಾನು ತತ್ ಕ್ಷಣ ಕೈಗೊಳ್ಳಬೇಕಾದ ಕಾರ್ಯ ಮರೆತು ಕೇಂದ್ರದತ್ತ ಬೊಟ್ಟು ತೋರುತ್ತಿದೆ. ಅಲ್ಲದೇ, ‘ಸಿಎಂ ಮೆಕ್ಕೆಜೋಳ ಆಮದು ಬಗ್ಗೆ ಹಸಿ ಹಸಿ ಸುಳ್ಳುಗಳ ರೈಲು ಬಿಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ ಸಚಿವ ಜೋಶಿ, ಈ ಸಂಬಂಧ ಸಿಎಂಗೆ ನೇರಾ ನೇರಾ ಪ್ರಶ್ನೆಗಳನ್ನೂ ಮುಂದಿಟ್ಟಿದ್ದಾರೆ.

*ಡಿಸ್ಟಿಲರಿಗಳಿಗೇಕೆ ಸೂಚನೆ ನೀಡಿಲ್ಲ?:* ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳದ ಖಾತರಿ ಖರೀದಿಗೆ NCCF ಅಥವಾ NAFED ಜತೆ ಒಪ್ಪಂದ ಮಾಡಿಕೊಳ್ಳಲು ರಾಜ್ಯದ ಡಿಸ್ಟಿಲರಿಗಳಿಗೆ ನೀವೇಕೆ ಸೂಚನೆ ನೀಡಿಲ್ಲ? ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದಿಂದಲೇ ಪರವಾನಗಿ ಪಡೆದ ಈ ಡಿಸ್ಟಿಲರಿಗಳಿಗೆ ಮೆಕ್ಕೆಜೋಳ ಖರೀದಿಗಾಗಿ ಅಧಿಕೃತ ಒಪ್ಪಂದ ಮಾಡಿಕೊಳ್ಳಲು ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕಿತ್ತು ಎಂದು ಜೋಶಿ ತಿರುಗೇಟು ನೀಡಿದ್ದಾರೆ.

*ಡಿಸ್ಟಿಲರಿಗಳಿಗೆ ಬೆಂಬಲ ಬೆಲೆ ಏಕೆ ಕಡ್ಡಾಯಗೊಳಿಸಿಲ್ಲ?;* ಡಿಸ್ಟಿಲರಿಗಳು ಕನಿಷ್ಠ ಬೆಂಬಲ ಬೆಲೆ(MSP)ಯಲ್ಲೇ ಮೆಕ್ಕೆಜೋಳ ಖರೀದಿಸಬೇಕೆಂದು ಕಡ್ಡಾಯಗೊಳಿಸಿಲ್ಲವೇಕೆ ಸ್ಥಳೀಯ ಖರೀದಿ ನಿಯಮಗಳನ್ನು ಜಾರಿಗೊಳಿಸುವ ಸಂಪೂರ್ಣ ಅಧಿಕಾರ ರಾಜ್ಯ ಸರ್ಕಾರದ ಬಳಿ ಇದೆಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

‘ಒಂದು ವೇಳೆ ಡಿಸ್ಟಿಲರಿಗಳು mspಗಿಂತ ಕಡಿಮೆ ದರದಲ್ಲಿ ಮೆಕ್ಕೆಜೋಳ ಖರೀದಿಸುತ್ತಿದ್ದರೆ ಅದಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಸೂಕ್ತ ಆದೇಶ ನೀಡದಿರುವುದೇ ಪ್ರಮುಖ ಕಾರಣ’ ಎಂದು ಚಾಟಿ ಬೀಸಿದ ಸಚಿವರು, ಡಿಸ್ಟಿಲರಿಗಳು ಬೇಡಿಕೆ ನೀಡಬೇಕೆಂದು SOP ಯಲ್ಲಿ ಸ್ಪಷ್ಟವಾಗಿ ಹೇಳಿದೆ. ಅಲ್ಲದೇ, ಈ ಎಲ್ಲಾ ಡಿಸ್ಟಿಲರಿಗಳು ರಾಜ್ಯ ಸರ್ಕಾರದ ಅಬಕಾರಿ ಇಲಾಖೆ ಅಡಿ ಬರುತ್ತವೆ. ಇದೆಲ್ಲಾ ಗೊತ್ತಿದ್ದರೂ ನಿಮ್ಮ ವೈಫಲ್ಯ, ಆಡಳಿತ ನಿಷ್ಕ್ರಿಯತೆ ಮರೆಮಾಚಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತ ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದೀರಿ ಎಂದು ಸಿಎಂ ವಿರುದ್ಧ ಕಿಡಿ ಕಾರಿದರು.

*70 ಲಕ್ಷ ಮೆಟ್ರಿಕ್ ಟನ್ ಆಮದು ಹಸಿ ಸುಳ್ಳು:* ಇನ್ನು ಕೇಂದ್ರ ಸರ್ಕಾರ ಈ ವರ್ಷ 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಆಮದು ಮಾಡಿಕೊಂಡಿದೆ ಎಂಬುದೇ ಹಸಿ ಸುಳ್ಳು. ಇದು ಸತ್ಯಕ್ಕೆ ದೂರವಾದ ಮಾತು ಎಂದ ಸಚಿವರೂ, 2025-26ರಲ್ಲಿ ಕೇವಲ 0.5 LMT ಮಾತ್ರ ಆಮದಾಗಿದೆ. ಇದಕ್ಕಿಂತ ರಫ್ತು ಹೆಚ್ಚಿದೆ. ಬರೋಬ್ಬರಿ 2.52 LMT ರಫ್ತು ಮಾಡಿದೆ ಎಂದು ಅಂಕಿ ಅಂಶ ಸಹಿತ ವಿವರಿಸಿದರು ಸಚಿವರು.
ಮೆಕ್ಕೆಜೋಳದ ಆಮದು ಸುಂಕ ಶೇ.50ರಷ್ಟಿದ್ದು, ಇದು ಆಮದನ್ನು ಪರಿಣಾಮಕಾರಿಯಾಗಿ ತಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ವಾಸ್ತವ ಬಿಟ್ಟು ಸುಳ್ಳು ಅಂಕಿಅಂಶಗಳನ್ನು ನೀಡುತ್ತಿದ್ದಾರೆ. ಬ್ಲೇಮ್ ಗೇಮನ್ನೇ ತಮ್ಮ ಆಡಳಿತದ ಮೂಲ ಮಂತ್ರವನ್ನಾಗಿಸಿಕೊಂಡಿದ್ದಾರೆ. ಇದರಿಂದ ಏನೂ ಪ್ರಯೋಜನವಾಗದು ಎಂದು ಜೋಶಿ ತಿರುಗೇಟು ನೀಡಿದರು.
ಎಥೆನಾಲ್ ಮತ್ತು ಕೈಗಾರಿಕಾ ಬಳಕೆಗೆ ಮೆಕ್ಕೆಜೋಳ ಹಂಚಿಕೆ ಪ್ರಮಾಣದಲ್ಲಿ ಅಧಿಕ ಏರಿಕೆಯಾಗಿದೆ. 2022-23ರಲ್ಲಿ 8.29 LMT, 2023-24ರಲ್ಲಿ 75.38 LMT, 2024-25ರಲ್ಲಿ ಬರೋಬ್ಬರಿ 125.75 LMT ಆಗಿದೆ. 2022-23 ಕ್ಕೆ ಹೋಲಿಸಿದರೆ ಶೇ.1,417 ರಷ್ಟು ಹೆಚ್ಚಳವಾಗಿದೆ ಮತ್ತು ಕಳೆದ ವರ್ಷಕ್ಕಿಂತ ಶೇ.66ರಷ್ಟು ಏರಿಕೆಯಾಗಿದೆ. ಕೇಂದ್ರ ಸರ್ಕಾರ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿಸಿದೆ. ಆದರೆ ರಾಜ್ಯ ಸರ್ಕಾರ ರೈತರಿಗೆ ಇದರ ಲಾಭ ಲಭಿಸುವಂತೆ ನೋಡಿಕೊಳ್ಳುವಲ್ಲಿ ಸೋತಿದೆ ಎಂದು ಪ್ರಲ್ಹಾದ ಜೋಶಿ ಆರೋಪಿಸಿದರು.

*ರೈತರ ಕಲ್ಯಾಣಕ್ಕೆ ಕೇಂದ್ರ ಸದಾ ಬದ್ಧ:* ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕೆ ಸದಾ ಬದ್ಧವಾಗಿದೆ. ಇದನ್ನರಿಯದೆ ರಾಜ್ಯ ಸರ್ಕಾರ ಪ್ರತಿ ಬಾರಿಯೂ ಕೇಂದ್ರದತ್ತ ಬೆರಳು ತೋರಿ ದೂಷಿಸುವುದು ಸರಿಯಲ್ಲ. ಇದರ ಬದಲು ರಾಜ್ಯದ ರೈತರ ಸಂಕಷ್ಟ ಪರಿಹರಿಸುವಲ್ಲಿ ಕೂಡಲೇ ಕಾರ್ಯತತ್ಪರ ವಗಳು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು