7:37 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

23/11/2025, 17:24

* *ನವೆಂಬರ್ 28ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ*

* *ಪ್ಯಾಲೇಸ್‌ ಮೈದಾನದಲ್ಲಿ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವರು*

ಬೆಂಗಳೂರು(reporterkarnataka.com): ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಹ್ವಾನ ನೀಡಿದರು.


ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು, ಅಂದಿನ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಆಹ್ವಾನ ಪತ್ರಿಕೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರು ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಗಳಿದ್ದು, ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದರು.

* *ಸಿದ್ಧತೆ ಪರಿಶೀಲಿಸಿದ ಸಚಿವರು:*
ಬಳಿಕ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಸಿದ್ಧತೆಗಳನ್ನು ಸಚಿವರು ಪರಿಶೀಲನೆ ನಡೆಸಿದರು. ಸುಮಾರು 50 ಸಾವಿರಕ್ಕೂ ಅಧಿಕ ಮಹಿಳೆಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಯಾವುದೇ ಲೋಪದೋಷಗಳು ಆಗದಂತೆ ಎಚ್ಚರಿಕೆ ವಹಿಸಬೇಕು. ‌ಕಾರ್ಯಕ್ರಮಕ್ಕೆ ಆಗಮಿಸುವ ಮಹಿಳೆಯರಿಗೆ, ಮಕ್ಕಳಿಗೆ ಸೂಕ್ತ ರೀತಿಯಲ್ಲಿ ವ್ಯವಸ್ಥೆಗಳನ್ನು ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ ಎಚ್.ನಿಶ್ವಲ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು