10:40 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಾಧ್ಯಮಗಳು ಮೌಢ್ಯವನ್ನು ಬಿತ್ತ ಬಾರದು, ಪ್ರಜಾಪ್ರಭುತ್ವದ ಆಶಯ ಎತ್ತಿಹಿಡಿಯಬೇಕು: ಕೆ.ವಿ.ಪ್ರಭಾಕರ್

23/11/2025, 20:06

ಮಂಗಳೂರು(reporterkarnataka.com): ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯಬೇಕು. ಸಮಾಜದಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡಬಾರದು ಎಂದು ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.
ಅವರು ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತ್ರಿ ಕೋಶ ವಿಭಾಗದ ವತಿಯಿಂದ ಶನಿವಾರ ಹಮ್ಮಿಕೊಂಡ ರಾಷ್ಟ್ರೀಯ ಪತ್ರಿಕಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ಆಧುನಿಕ ಕಾಲಘಟ್ಟದಲ್ಲಿ ಸುಳ್ಳು ಸುದ್ದಿ, ಊಹಾ ಪತ್ರಿಕೋದ್ಯಮ ವೇಗವಾಗಿ ಹರಡುತ್ತದೆ. ಈ ರೀತಿಯ ಪತ್ರಿಕೋದ್ಯಮ ಸಮಾಜದಲ್ಲಿ ವಿಭಜನೆ ಅಭದ್ರತೆಗೆ ಕಾರಣವಾಗುತ್ತಿದೆ. ಮಾಧ್ಯಮ ಗಳು ಜನರು ಮತ್ತು ಸರಕಾರದ ನಡುವೆ ರಾಯಭಾರಿಗಳಂತೆ ಕಾರ್ಯ ನಿರ್ವಹಿಸಬೇಕಾ ಗಿದೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಕಾಲದಲ್ಲಿ
ಮುಂಚೂಣಿಯಲ್ಲಿದ್ದ ಅಭಿವೃದ್ಧಿ ಪತ್ರಿಕೋದ್ಯಮ ಕಳೆಗುಂದುತ್ತಿದೆ ಎಂದರು.
ಇಂದಿನ ಸುದ್ದಿ ಪ್ರಸಾರದ ಧಾವಂತದಲ್ಲಿ, ಡಿಜಿಟಲ್ ಮಾಧ್ಯಮಗಳ
ಕಾಲಘಟ್ಟದಲ್ಲಿ ಪತ್ರಿಕೋದ್ಯಮದಲ್ಲಿ
ವಿಶ್ವಾಸಾರ್ಹ ತೆಯನ್ನು ಉಳಿಸಿಕೊಳ್ಳುವುದೇ ಒಂದು ಸವಾಲಾಗಿದೆ. ಪತ್ರಕರ್ತರಿಗೆ ಸಮಾಜವನ್ನು ತಿದ್ದುವ ಅವಕಾಶವಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವಾಗದಂತೆ ಪತ್ರಕರ್ತರು ಎಚ್ಚರ ವಹಿಸಬೇಕಾಗಿದೆ.1966ರ ನವೆಂಬರ್ 16ರಂದು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ರಚನೆಯಾದ ಹಿನ್ನೆಲೆಯಲ್ಲಿ ಆ ದಿನವನ್ನು ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.
ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಭವಿಷ್ಯದ ಮಾಧ್ಯಮಗಳು ಎಂಬ ವಿಷಯದ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಉಪನ್ಯಾಸ ನೀಡಿದರು.

ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಗಣಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯ ನಿರ್ದೇಶಕ ಖಾದರ್ ಶಾ, ಮಂಗಳೂರು ರೋಟರಿ ಸೆಂಟ್ರಲ್ ಘಟಕದ ಅಧ್ಯಕ್ಷ ಭಾಸ್ಕರ ರೈ ಕಟ್ಟ, ಕರ್ನಾಟಕ ಸೆಣಬು ನಿಗಮ ಅಧ್ಯಕ್ಷ ನಟರಾಜ್, ರಾಜ್ಯ ಬಾಲಭವನ ಸಮಿತಿಯ ಅಧ್ಯಕ್ಷ ಬಿ.ಆರ್ ನಾಯ್ಡು ಉಪಸ್ಥಿತರಿದ್ದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ
ಡಾ.ಸುರೇಶ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು