10:28 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅನಧಿಕೃತ ಸ್ಪಾ ಸೆಂಟರ್ ಗಳ ಮೇಲೆ ಕಣ್ಗಾವಲು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

24/11/2025, 14:40

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarmataka@gmail.com

ಅನಧಿಕೃತ ಸ್ಪಾಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸ್ಪಾಗಳ ಮೇಲೆ ಕಣ್ಗಾವಲು ಇಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ವೈದ್ಯಕೀಯ ಸ್ಪಾಗಳನ್ನು ವೈದ್ಯಕೀಯ ಸಂಸ್ಥೆಗಳೆಂದು ಘೋಷಿಸಿ, ಆರೋಗ್ಯ ಇಲಾಖೆಯ ನಿಯಂತ್ರಣಕ್ಕೆ ತರಲಾಗಿದೆ.
‘ಜನರ ಆರೋಗ್ಯ ಕಾಳಜಿಯನ್ನು ಕಡೆಗಣಿಸಿ, ಕೇವಲ ವ್ಯಾಪಾರ ದೃಷ್ಟಿಯಿಂದ ಅನಧಿಕೃತವಾಗಿ ತಲೆಯೆತ್ತಿರುವ ವೈದ್ಯಕೀಯ ಸ್ಪಾಗಳ ಬಗ್ಗೆ ಆರೋಗ್ಯ ಇಲಾಖೆಗೆ ಹಲವಾರು ದೂರುಗಳು ಬಂದಿದ್ದವು ಎಂದು ತಿಳಿಸಿದ್ದಾರೆ.
ಈ ಕ್ಷೇತ್ರದಲ್ಲಿ ಪರಿಣತರಲ್ಲದಿದ್ದರೂ ರಾಸಾಯನಿಕಗಳನ್ನು ಬಳಸಿ ಸೌಂದರ್ಯವರ್ಧಕ ಚಿಕಿತ್ಸೆ ನೀಡುತ್ತಿದ್ದ, ವೃದ್ಧರ ಮೂಳೆ-ಕೀಲು ಸಮಸ್ಯೆಗಳನ್ನೇ ಬಂಡವಾಳ ಮಾಡಿಕೊಂಡು ರೇಡಿಯೇಷನ್ ಥೆರಫಿ ಒದಗಿಸುತ್ತಿದ್ದ ಜಾಲವನ್ನು ಆರೋಗ್ಯ ಇಲಾಖೆ ಪತ್ತೆ ಮಾಡಿ ಕ್ರಮಕೈಗೊಂಡಿದೆ. ಆದರೂ ಹೆಚ್ಚಿನ ಕಣ್ಗಾವಲಿರಿಸುವುದು ಅತ್ಯಗತ್ಯ ಎಂಬುದನ್ನು ಮನಗಂಡು ಈ ಕೇಂದ್ರಗಳನ್ನು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007ರ ಅಡಿಯಲ್ಲಿ ವೈದ್ಯಕೀಯ ಸಂಸ್ಥೆಗಳ ವ್ಯಾಪ್ತಿಗೆ ತರಲಾಗಿದೆ’ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. 
ಈ ಬಗ್ಗೆ ಹೊರಡಿಸಲಾದ ಆದೇಶಕ್ಕೆ ಸಂಬಂಧಿಸಿದಂತೆ ‘ಎಕ್ಸ್’ ಮಾಡಿರುವ ಅವರು, ‘ಲೇಸರ್ ಚಿಕಿತ್ಸೆಗಳು, ಲಿಪೊಸಕ್ಷನ್, ಕೂದಲು ಕಸಿ, ಐವಿ ಹೈಡ್ರೇಷನ್ ಥೆರಪಿ ಸೇರಿ ಇತರೆ ಸೌಂದರ್ಯವರ್ಧಕ ಚಿಕಿತ್ಸೆಯ ಗುಣಮಟ್ಟದ ಮೇಲೆ ಕಣ್ಗಾವಲಿಡಲು ಕ್ರಮ ಕೈಗೊಳ್ಳಲಾಗಿದೆ. ಅನಧಿಕೃತವಾಗಿ ವೈದ್ಯಕೀಯ ಅಭ್ಯಾಸ ಮಾಡುವ ಮತ್ತು ವೃತ್ತಿಪರರಲ್ಲದವರು ನಡೆಸುತ್ತಿರುವ ಸೌಂದರ್ಯವರ್ಧಕ ಚರ್ಮದ ಕ್ಲಿನಿಕ್‌ಗಳು, ಕೊರಿಯನ್ ಚರ್ಮದ ಆರೈಕೆ ಕೇಂದ್ರಗಳು, ಮಸಾಜ್ ಸೆಂಟರ್‌ಗಳು ಮತ್ತು ಸ್ಪಾಗಳನ್ನು ನಿಯಂತ್ರಿಸಲು ಸಾಧ್ಯವಾಗಲಿದೆ’ ಎಂದು ಹೇಳಿದ್ದಾರೆ.
‘ಅಲೋಪಥಿ ಅಥವಾ ಆಯುರ್ವೇದದಂತಹ ವೈದ್ಯಕೀಯ ಪದವಿ ಪಡೆದ ವೈದ್ಯರು ತಮ್ಮ ಕ್ಷೇತ್ರಕ್ಕೆ ಸಂಬಂಧವಿಲ್ಲದ ಸೌಂದರ್ಯವರ್ಧಕ ಕ್ಲಿನಿಕ್‌ಗಳನ್ನು ಅನಧಿಕೃತವಾಗಿ ನಡೆಸುವುದನ್ನು ನಿಯಂತ್ರಿಸಲು ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು, ಈ ಕ್ರಮವು ರಾಜ್ಯದಲ್ಲಿ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಪಾರದರ್ಶಕತೆ ತರಲು ಸಹಕಾರಿಯಾಗಲಿದೆ’ ಎಂದಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು