1:17 PM Wednesday1 - January 2025
ಬ್ರೇಕಿಂಗ್ ನ್ಯೂಸ್
ಸೋಲಾರ್ ಅಳವಡಿಸಿದರೆ ಕೇಂದ್ರದಿಂದ ಸಬ್ಸಿಡಿ: ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್… ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇ. 18ರಷ್ಟು ಜಿಎಸ್ ಟಿ ರದ್ದತಿ ಕೋರಿ ಶೀಘ್ರವೇ… ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ; ಡ್ರೋನ್ ಬಳಕೆ: ಸಚಿವ ಈಶ್ವರ… ಸಹಜ ಹೆರಿಗೆಗೆ ಆದ್ಯತೆ ನೀಡಿ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ: ನಕ್ಸಲರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ ಬೈಕಿನ ಹಿಂದೆ ನಿಂತು ಜ್ವಾಲಿ ರೈಡ್ ಮಾಡಿದ ಮಲೆನಾಡಿನ ಶ್ವಾನ: ವೀಡಿಯೋ ವೈರಲ್ ಸಾಹಿತ್ಯ ಅನುವಾದ ಸೇತುವೆ ಕಟ್ಟುವ ಕೆಲಸದಂತೆ: ಚಿಂತಕ ರಹಮತ್ ತರೀಕೆರೆ ಪ್ರತಿಪಾದನೆ ಕೆಪಿಎಸ್ ಸಿ ಮರುಪರೀಕ್ಷೆಯಲ್ಲೂ ಎಡವಟ್ಟು: ಕಾಂಗ್ರೆಸ್ ಸರಕಾರ ವಿರುದ್ದ ಪ್ರತಿಪಕ್ಷದ ನಾಯಕ ಆರ್.… ಕೋಲಾರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಂ.ಆರ್ ರವಿ ಅಧಿಕಾರ ಸ್ವೀಕಾರ ಕೊಕ್ಕಡ ದೇಗುಲದ ಅಚ್ಚುಮೆಚ್ಚಿನ ಶ್ಯಾಮ ಇನ್ನು ನೆನಪು ಮಾತ್ರ: ಅಲ್ಪಕಾಲದ ಅನಾರೋಗ್ಯದಿಂದ ದೇವರಪಾದ…

ಇತ್ತೀಚಿನ ಸುದ್ದಿ

ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ಕೂಡ ರದ್ದು?: ಶೀಘ್ರದಲ್ಲೇ ಹೊರ ಬೀಳಲಿದೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಆದೇಶ

23/05/2021, 15:22

ನವದೆಹಲಿ(reporterkarnataka news): ದೇಶದಲ್ಲಿ ಕೊರೊನಾ ಅರ್ಭಟದ ಹಿನ್ನೆಲೆಯಲ್ಲಿ ಈಗಾಗಲೇ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಇದೀಗ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡುವ ಕುರಿತು ಚಿಂತನೆ ಆರಂಭವಾಗಿದೆ.

ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ನಡೆಸಬೇಕೆ ? ಅಥವಾ ಬೇಡವೇ? ಅನ್ನೋ ಕುರಿತು ಮಹತ್ವದ ಸಭೆ ನಡೆಯಲಿದೆ

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿವಾಲ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸಚಿವರಾದ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಸೇರಿದಂತೆ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು ಕೂಡ ಭಾಗಿಯಾಗಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ವಿಪರೀತವಾಗಿದ್ದು, ಲಾಕ್ ಡೌನ್ ಜಾರಿಯಲ್ಲಿದೆ. ಕೊರೊನಾ ಸೋಂಕಿನ ಜೊತೆಗೆ ಬ್ಲ್ಯಾಕ್ ಹಾಗೂ ವೈಟ್ ಫಂಗಸ್ ಸೋಂಕು ಪತ್ತೆಯಾಗುತ್ತಿದೆ. ಹೀಗಾಗಿ ಮಹತ್ವದ ಆದೇಶ ಹೊರ ಬೀಳುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು