ಇತ್ತೀಚಿನ ಸುದ್ದಿ
ಬೆಂಗಳೂರು: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ – ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ
25/11/2025, 20:16
ಬೆಂಗಳೂರು(reporterkarnataka.com): ಭಾರತೀಯ ಗಗನಯಾತ್ರಿ ಮತ್ತು ಭಾರತೀಯ ವಾಯುಪಡೆಯ (IAF) ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಹಾರ್ದ ಭೇಟಿಯಾದರು.




ಖಾಸಗಿ ಆಕ್ಸಿಯಮ್-4 ಮಿಷನ್‌ನಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ತೆರಳಿದ್ದರು. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.












