ಇತ್ತೀಚಿನ ಸುದ್ದಿ
Kodagu | ಸುಂಟಿಕೊಪ್ಪ ಸಮೀಪದ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ; ಕಾರಿನ ಚಾಲಕ ಗಂಭೀರ
25/11/2025, 20:19
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನ ಚಾಲಕನಿಗೆ ಗಂಭೀರ ಗಾಯಗೊಂಡ ಘಟನೆ ಸುಂಟಿಕೊಪ್ಪ ಸಮೀಪದ ಶಾಂತಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಪವರ್ ಪ್ಲಸ್ ಬಸ್ ಮತ್ತು ಮಡಿಕೇರಿ ಕಡೆಗೆ ಬರುತ್ತಿದ್ದ ವ್ಯಾಗನರ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಬಲಭಾಗದ ಟಯರ್ ಕಿತ್ತು ರಸ್ತೆ ಬದಿಗೆ ಹಾರಿ ಬಿದ್ದಿದೆ. ಅಲ್ಲದೇ ಕಾರಿನ ಮುಂಭಾಗ ಜಖಂಗೊಂಡಿದೆ.
ಗಾಯಾಳುವನ್ನು ಜಿಲ್ಲಾಸ್ಪತ್ರೆ ಮಡಿಕೇರಿಗೆ ಸಾಗಿಸಲಾಗಿದೆ. ಸುಂಟಿಕೊಪ್ಪ ಠಾಣೆಯ ಎಎಸ್ಐ ಸೈಮನ್ ಮತ್ತು ಹೆದ್ದಾರಿ ಗಸ್ತು ಪಡೆಯ ಎಎಸ್ಐ ಶೇಷಪ್ಪ ಸ್ಥಳಕ್ಕೆ ಧಾವಿಸಿ ಮಹಜರು ನಡೆಸಿದ್ದಾರೆ.
ಕಾರು ಚಾಲಕನ ಅತೀವೇಗ ಮತ್ತು ಅಜಾಗರೂಕತೆಯೇ ಈ ಅಪಘಾತಕ್ಮೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ಸಾರೆ.
ಅಪಘಾತದ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯು ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.












