8:09 PM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ: ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ ಕೆಂಜಿಗೆ ಅಭಿಮತ

26/11/2025, 12:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು:ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಪ್ರಾರಂಭದಿಂದಲೂ ಹಲವರು ಸಹಕಾರ ನೀಡುತ್ತಾ ಬಂದಿದ್ದು ಮುಂದೆಯೂ ಕೂಡ ಎಲ್ಲರ ಸಹಕಾರ ಅಗತ್ಯ ಎಂದು ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ ಕೆಂಜಿಗೆ ಹೇಳಿದರು.
ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
೨೦೦೭ರಲ್ಲಿ ವಿಸ್ಮಯ ಪ್ರತಿಷ್ಠಾನದ ಎಂಬ ಹೆಸರಿನಿಂದ ಪ್ರಾರಂಭವಾಗಿ ಆ ನಂತರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಜೀವವೈವಿದ್ಯ ಸಂಶೋಧನಾ ಕೇಂದ್ರ ಎಂದಾಯಿತು. ಪ್ರಸ್ತುತ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನವಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಮಾತನಾಡಿ, ತೇಜಸ್ವಿ ಪ್ರತಿಷ್ಠಾನದ ದ್ಯೇಯ್ಯೋದ್ದೇಶಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸಿಕೊಂಡು ಬರಲಾಗುತ್ತಿದೆ. ಪ್ರತಿಷ್ಠಾನವು ನಿರಂತರ ಚಟುವಟಿಕೆಗಳ ಮೂಲಕ ಜ್ಞಾನಾಸಕ್ತರನ್ನು ತಲುಪುವಲ್ಲಿ ಸಕ್ರಿಯವಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಅವರು, ತೇಜಸ್ತಿ ಪ್ರತಿಷ್ಠಾನದ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿ, ನೂತನ ತಂಡದ ಮಾರ್ಗದರ್ಶನದಲ್ಲಿ ಇನ್ನಷ್ಟು ಸಕ್ರಿಯ ಹಾಗೂ ಸಾರ್ಥಕ ಕಾರ್ಯಕ್ರಮಗಳು ನಡೆಯಲಿ. ಜಿಲ್ಲಾಡಳಿತ ಪ್ರತಿಷ್ಠಾನದ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುತ್ತದೆ ಎಂದರು.
ಈ ಸಂದರ್ಭದಲ್ಲಿ ತೇಜಸ್ವಿ ಪ್ರತಿಷ್ಠಾನದ ನೂತನ ಅಧ್ಯಕ್ಷರಾದ ಡಾ.ಪ್ರದೀಪ ಕೆಂಜಿಗೆ ಸದಸ್ಯರಾದ ರಾಘವೇಂದ್ರ, ರವೀಶ್ ಕ್ಯಾತನಬೀಡು, ರುದ್ರಸ್ವಾಮಿ ಅವರನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಅಭಿನಂದಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಎಲೆಕ್ಟಿçÃಷಿಯನ್ ಶ್ರೀನಿವಾಸ್, ನವದೀಪ್, ಪೂರ್ಣೇಶ್, ಶಾಮಿಲಿ, ಮಲ್ಲಿಕ್, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಕೀಟತಜ್ಞ ಡಾ.ಅವಿನಾಶ್, ಲೇಖಕ ಪೂರ್ಣೇಶ್ ಮತ್ತಾವರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು