2:14 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿ

28/11/2025, 07:39

ಉಡುಪಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಡುಪಿಗೆ ಭೇಟಿ ನೀಡಲಿದ್ದು, ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್‌ ಗೀತೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ರೋಡ್ ಶೋ ಕೂಡ ನಡೆಯಲಿದೆ.
ನ.28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ.
ಪ್ರಧಾನಿ ಆಗಮನದ ಹಿನ್ನೆಯಲ್ಲಿ ಎಸ್‌ಪಿಜಿ, ಕೇಂದ್ರ ಹಾಗೂ ರಾಜ್ಯ ಗುಪ್ತಚರ ವಿಭಾಗ ಹೊರತುಪಡಿಸಿ ಸುಮಾರು 3 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಗುರುವಾರ ಬೆಳಗ್ಗೆ ಮೊಕ್ ಡ್ರಿಲ್ ನಡೆಸಲಾಗಿದೆ. ಉಡುಪಿ ನಗರದ ಹೃದಯ ಭಾಗದಲ್ಲಿ ಎಲ್ಲೆಲ್ಲೂ ಪೊಲೀಸರ ಸರ್ಪಗಾವಲು ಹಾಕಲಾಗಿದೆ.
ಮೋದಿ ಅವರ ಸಂಪೂರ್ಣ ಕಾರ್ಯಕ್ರಮ 40 ನಿಮಿಷ ಮುಂಚಿತವಾಗಿ ಆರಂಭವಾಗಲಿದೆ.
ರೋಡ್ ಶೋ ಕೂಡ ನಿಗದಿತ ಸಮಯಕ್ಕೆ ಮುಂಚಿತವಾಗಿ ಬೆಳಗ್ಗೆ 11ರಿಂದ 11.30ರ ವರೆಗೆ ನಡೆಯಲಿದೆ. ಕೃಷ್ಣ ದರ್ಶನದ ಬಳಿಕ ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿಯಾಗಿ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಮೋದಿ ನಿರ್ಗಮಿಸಲಿದ್ದಾರೆ
ಶ್ರೀ ಕೃಷ್ಣಮಠದಲ್ಲಿ ದೇವರ ದರ್ಶನ ಪಡೆದು ಅನಂತರ ಗೀತಾಮಂದಿರಕ್ಕೆ ಭೇಟಿ ನೀಡಿ, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದ ರೊಂದಿಗೆ ಮಾತುಕತೆ ನಡೆಸಿ ಪಾರ್ಕಿಂಗ್‌ ಪ್ರದೇಶದ ಸಮೀಪದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿ ಮೋದಿ ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ಮೂಲಕ ಉಡುಪಿಯ ಆದಿಉಡುಪಿ ಹೆಲಿಪ್ಯಾಡ್‌ಗೆ 11.35ಕ್ಕೆ ಬರುವುದು ನಿಗದಿಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು