12:59 AM Sunday27 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಹುಣಸೂರು ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ; ಇಬ್ಬರು ರೈತರ ಮೇಲೆ ದಾಳಿ; ವ್ಯಾಘ್ರ ಸೆರೆಗೆ ಕಾರ್ಯಾಚರಣೆ ಶುರು

28/11/2025, 10:13

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಈಗ ಹುಣಸೂರಿನಲ್ಲಿ ಹುಲಿ ಕಾಟ ಶುರುವಾಗಿದ್ದು ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ.
ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ರೈತರು ಪಾರಾಗಿದ್ದಾರೆ. ಗೌಡನಕಟ್ಟೆಯ ರೈತ ಪ್ರಕಾಶ್ ಹಾಗೂ ಸ್ವಾಮಿ ಹುಲಿ ದಾಳಿಯಿಂದ ಪಾರಾಗಿದ್ದಾರೆ. ಹುಲಿ ಘರ್ಜಿಸುತ್ತಾ ದಾಳಿಗೆ ಬಂದಾಗ ಜೋರಾಗಿ ರೈತರು ಕಿರುಚಿಕೊಂಡಿದ್ದಾರೆ.
ಅಕ್ಕ ಪಕ್ಕದಲ್ಲಿದ್ದ ರೈತರು ಸಹ ಜೋರಾಗಿ ಕೂಗಿಕೊಂಡಿದ್ದರಿಂದ ಹುಲಿ ವಾಪಸ್ಸಾಗಿದೆ. ಸದ್ಯ ಹೊಲದಲ್ಲೇ ಹುಲಿ ಮರಿಗಳ ಜೊತೆಗಿರುವ ಸಾಧ್ಯತೆ ಇದೆ. ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ರೈತರು ಘೇರಾವ್ ಹಾಕಿ ಹುಲಿ ಸೆರೆ ಹಿಡಿದ ನಂತರವಷ್ಟೆ ಸ್ಥಳದಿಂದ ಹೋಗವಂತೆ ತಾಕೀತು ಮಾಡಿದ್ದಾರೆ.
ಗ್ರಾಮಸ್ಥರ ಆಕ್ರೋಶಕ್ಕೆ ಮಣಿದ ಅರಣ್ಯಾಧಿಕಾರಿಗಳು ರಾತ್ರಿಯಿಂದ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದು, 4 ಆನೆಗಳೊಂದಿಗೆ ಅರಣ್ಯ ಇಲಾಖೆಯ ಟಾಸ್ಕ್ ಪೋರ್ಸ್ ಸಿಬ್ಬಂದಿ ಕಾರ್ಯಾಚರಣೆ ಯಲ್ಲಿ ತೊಡಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು