ಇತ್ತೀಚಿನ ಸುದ್ದಿ
Udupi | ಪ್ರಧಾನಿ ಮೋದಿಗೆ `ಭಾರತ ಭಾಗ್ಯವಿದಾತ’ ಬಿರುದು ಪ್ರದಾನ: ಪರ್ಯಾಯ ಪುತ್ತಿಗೆ ಶ್ರೀಗಳಿಂದ ಸನ್ಮಾನ
28/11/2025, 13:36
ಉಡುಪಿ(reporterkarnataka.com): ಶ್ರೀಕೃಷ್ಣ ಮಠ ಮತ್ತು ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ `ಭಾರತ ಭಾಗ್ಯವಿದಾತ’ ಬಿರುದು ನೀಡಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸನ್ಮಾನಿಸಿದರು.












ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ನಂತರ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ವಿಶ್ವ ಗೀತಾ ಪರ್ಯಾಯ – ಲಕ್ಷಕಾಂತ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಪ್ರಧಾನಿ ಮೋದಿಗೆ ಭಾರತ ಭಾಗ್ಯವೀದಾತ ಬಿರುದು ಸಮರ್ಪಣೆ ಮಾಡಿದ್ದಾರೆ.
ಇದೀಗ ಪ್ರಧಾನಿ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಿದರು. ಉಡುಪಿ ಕೃಷ್ಣಮಠದಲ್ಲಿ 1 ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿಂದ ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. 1 ಲಕ್ಷ ಭಕ್ತರ ಜೊತೆ ಶ್ಲೋಕ ಪಠಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದು, ಮೋದಿ ಕೊನೆಯ 10 ಶ್ಲೋಕ ಪಠಿಸಿದರು.
ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ನಂತರ ಪ್ರಧಾನಿ ಮೋದಿಯವರು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜೊತೆಗೆ ಮಾತುಕತೆ ನಡೆಸಿದರು.












