3:51 PM Friday28 - November 2025
ಬ್ರೇಕಿಂಗ್ ನ್ಯೂಸ್
Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ

ಇತ್ತೀಚಿನ ಸುದ್ದಿ

Mangaluru | ಪ್ರಧಾನಿಗೆ ರಾಜ್ಯ ಸರಕಾರದಿಂದ ಮನವಿ ಸಲ್ಲಿಕೆ: ಬರಮಾಡಿಕೊಂಡು ಬೇಡಿಕೆ ಮುಂದಿಟ್ಟ ಉಸ್ತುವಾರಿ ಸಚಿವ

28/11/2025, 15:50

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಂತೆ ರಾಜ್ಯ ಸರ್ಕಾರ ಮೋದಿಗೆ ಒಂದು ಮನವಿ ಸಲ್ಲಿಸಿದೆ.
ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯವರನ್ನು ಬರಮಾಡಿಕೊಂಡು ಸ್ವಾಗತಿಸಿದ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಮನವಿ ಸಲ್ಲಿಸಿದರು.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರವು ತಕ್ಷಣ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ, ಎಥೆನಾಲ್ ಹಂಚಿಕೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಿ, ರೈತರಿಗೆ ದೊರೆಕಬೇಕಾದ ನ್ಯಾಯಯುತ ಬೆಲೆ ಸಿಗುವಂತೆ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದೆ.
ಇಂದು ಪ್ರಧಾನಿಗಳು ಉಡುಪಿಗೆ ಭೇಟಿ ನೀಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮೋದಿಯವರನ್ನು ರಾಜ್ಯಕ್ಕೆ ಬರಮಾಡಿಕೊಂಡು, ನಮ್ಮ ಮನವಿ ಪತ್ರವನ್ನು ಅವರಿಗೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ತಕ್ಷಣ ರಾಜ್ಯದ ರೈತರ ಕಷ್ಟವನ್ನು ಅರ್ಥೈಸಿಕೊಂಡು, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ಭಾವಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು