5:40 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

Sports | ಚೆಸ್: ವಾಗ್ದೇವಿ ಪಿಯು ಕಾಲೇಜಿನ ಸಾತ್ವಿಕ್ ಎ. ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

28/11/2025, 18:54

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail com

ಬೆಂಗಳೂರಿನಲ್ಲಿ ನಡೆದ ಬಾಲ-ಬಾಲಕಿಯರ ಕರ್ನಾಟಕ ಸ್ಟೇಟ್ ಚೆಸ್ ಚಾಂಪಿಯನ್ ಷಿಪ್ 2025-26 ಪಂದ್ಯಾವಳಿಯಲ್ಲಿ ವಾಗ್ದೇವಿ ಪಿಯು ಕಾಲೇಜಿನ ಸಾತ್ವಿಕ್ ಎ. ಶೆಟ್ಟಿ (ದ್ವಿತೀಯ ಪಿಯು ವಿಜ್ಞಾನ ವಿಭಾಗ) ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಈತ ಬೆಟ್ಟಮಕ್ಕಿ ನಿವಾಸಿಗಳಾದ ಸುಮನಾ ಮತ್ತು ಅಶೋಕ ದಂಪತಿಯ ಪುತ್ರ.ಶಿಕ್ಷಕ ದಂಪತಿಯ ಮಗನಾದ ಈತ ಓದಿನಲ್ಲಿಯೂ ಅತ್ಯಂತ ಪ್ರತಿಭಾನ್ವಿತ, ನಿರಂತರ 12 ವರ್ಷಗಳಿಂದ ಚೆಸ್ ಆಟವನ್ನು ಅತ್ಯಂತ ಆಸಕ್ತಿಯಿಂದ ಆಡುತ್ತಾ ಬಂದಿದ್ದು, SGFI ( ಸ್ಕೂಲ್ ಗೇಮ್ ಫೆಡರೇಷನ್ ಅಫ್ ಇಂಡಿಯಾ) ನಲ್ಲಿ ಸತತ ಎರಡನೆಯ ಬಾರಿಗೆ ರಾಷ್ಟ್ರಮಟ್ಟವನ್ನು ಪ್ರತಿನಿಧಿಸುತ್ತಿದ್ದಾನೆ. ಈ ವರ್ಷ ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ತೆರಳುತ್ತಿದ್ದಾನೆ.
ವಿದ್ಯಾರ್ಥಿಯ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕವೃಂದ ಮತ್ತು ಪೋಷಕರು ಅಭಿನಂದಿಸಿ ರಾಷ್ಟ್ರಮಟ್ಟದಲ್ಲಿ ಚಿನ್ನವನ್ನು ಪಡೆದುಕೊಳ್ಳಲಿ ಎಂದು ಶುಭಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು