6:18 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ

30/11/2025, 15:43

ಮಂಗಳೂರು(reporterkarnataka.com): ನಮ್ಮ ದೇಶವನ್ನು,ರಾಜ್ಯವನ್ನು ನಶಾಮುಕ್ತ ಹಾಗೂ ದ್ವೇಷಮುಕ್ತಗೊಳಿಸುವ ಮೂಲಕ ಆಹ್ಲಾದಕರ ಮತ್ತು ಆರೋಗ್ಯಕರ ವಾತಾವರಣ ನಿರ್ಮಿಸಬೇಕಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.


ನಗರದ ಮಂಗಳಾ ಸ್ಟೇಡಿಯಂನಲ್ಲಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ RGUHS ಕಾಲೇಜುಗಳ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಸಂಯುಕ್ತವಾಗಿ ಆಯೋಜಿಸಿದ್ದ ನಶಾಮುಕ್ತ ಕ್ಯಾಂಪಸ್ ಮತ್ತು ಅಂಗಾಂಗ ದಾನ ಪ್ರತಿಜ್ಞಾ ಅಭಿಯಾನದ ವಾಕ್‌ಥಾನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶ ಮತ್ತು ರಾಜ್ಯ ಮುಂಚೂಣಿಯಲ್ಲಿ ಇರಬೇಕಾದರೆ ನಶೆ ಹಾಗೂ ದ್ವೇಷ ಎಂಬ ಎರಡು ದುಷ್ಟಶಕ್ತಿಗಳನ್ನು ನಿಗ್ರಹಿಸುವುದು ಅನಿವಾರ್ಯ ಎಂದು ಅವರು ಹೇಳಿದರು.
ನಶಾಮುಕ್ತ ಕ್ಯಾಂಪಸ್ ಹಾಗೂ ಅಂಗಾಂಗ ದಾನ ಪ್ರತಿಜ್ಞಾ ಅಭಿಯಾನಗಳು ಭಾರತದ ಭವಿಷ್ಯವನ್ನು ರೂಪಿಸುವ ಪ್ರಮುಖ ಉಪಕ್ರಮಗಳು. ಒಂದು ದಿನದ ವಾಕ್‌ಥಾನ್ನೊಂ ದಿಗೆ ಮುಕ್ತಾಯಗೊಳ್ಳಬಾರದು; ವಿದ್ಯಾರ್ಥಿಗಳು ಜನಜಾಗೃತಿ ರಾಯಭಾರಿಗಳಾಗಿ ಎಲ್ಲೆಡೆ ಈ ಸಂದೇಶವನ್ನು ಹರಡಬೇಕು. ಬದಲಾವಣೆ ಒಂದೇ ದಿನದಲ್ಲಿ ಸಂಭವಿಸದು; ನಿರಂತರ ಮತ್ತು ಒಗ್ಗಟ್ಟಿನ ಪ್ರಯತ್ನ ಅಗತ್ಯ ಎಂದು ಖಾದರ್ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ವಿದ್ಯಾರ್ಥಿ ಜೀವನ ಭವಿಷ್ಯವನ್ನು ನಿರ್ಮಿಸುವ ಮುಖ್ಯ ಹಂತ. ಈ ಸಂದರ್ಭದಲ್ಲಿ ಸ್ವಯಂ ನಿಯಂತ್ರಣ ಸಾಧಿಸಿದರೆ ಮುಂದಿನ ಜೀವನ ಯಶಸ್ವಿಯಾಗುತ್ತದೆ. ಕ್ಷಣಿಕ ಆಕರ್ಷಣೆಗಳಿಂದ ದೂರವಿದ್ದು, ಅಧ್ಯಯನದಲ್ಲಿ ಏಕಾಗ್ರತೆ ಸಾಧಿಸಿದರೆ ಉತ್ತಮ ಜೀವನ ಖಚಿತ ಎಂದು ಸಲಹೆ ನೀಡಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ. ಮಾತನಾಡಿ, ದೇಶದ ಯುವ ಸಮುದಾಯ ವಿಶೇಷವಾಗಿ ಕರ್ನಾಟಕದ ವಿದ್ಯಾರ್ಥಿಗಳು ಡ್ರಗ್ ಮಾಫಿಯಾಕ್ಕೆ ಗುರಿಯಾಗುತ್ತಿರುವುದು ಗಂಭೀರ ಸಮಸ್ಯೆ ಎಂದು ಆತಂಕ ವ್ಯಕ್ತಪಡಿಸಿದರು.
ಪಂಜಾಬ್, ಕೇರಳ ಮತ್ತು ಉತ್ತರ ಭಾರತದ ರಾಜ್ಯಗಳ ನಂತರ ಡ್ರಗ್ ಪೆಡ್ಲರ್‌ಗಳ ದೃಷ್ಟಿ ಕರ್ನಾಟಕದತ್ತ ತಿರುಗಿದೆ. ದೇಶದಾದ್ಯಂತ 20–30% ವಿದ್ಯಾರ್ಥಿಗಳು ಒಂದಲ್ಲೊಂದು ಮಾದಕ ದ್ರವ್ಯದ ಪ್ರಭಾವಕ್ಕೆ ಒಳಗಾಗಿರುವುದು ಆತಂಕಕಾರಿ ವಿಷಯ. ವಿದ್ಯಾರ್ಥಿಗಳನ್ನು ಈ ವಿಷಜಾಲದಿಂದ ರಕ್ಷಿಸುವ ನಿಟ್ಟಿನಲ್ಲಿ RGUHS ರಾಜ್ಯವ್ಯಾಪಿ ನಶಾಮುಕ್ತ ಕ್ಯಾಂಪಸ್ ಅಭಿಯಾನ ಆರಂಭಿಸಿದೆ ಎಂದು ಅವರು ತಿಳಿಸಿದರು.
3.50 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ರಕ್ಷಣೆ ನಮ್ಮ ಆದ್ಯತೆ. ಕ್ಯಾಂಪಸ್‌ಗಳ ಸುತ್ತಮುತ್ತ ಮಾದಕ ವಸ್ತುಗಳ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಪ್ರತಿಯೊಂದು ಕಾಲೇಜಿನಲ್ಲೂ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ. ಜಾಗೃತಿ ಜಾಥಾ, ಕಾರ್ಯಾಗಾರಗಳು, ಅಭಿಯಾನಗಳ ಮೂಲಕ ವಿದ್ಯಾರ್ಥಿಗಳನ್ನು ಡ್ರಗ್ಸ್, ತಂಬಾಕು, ಮದ್ಯಪಾನದ ದುಷ್ಪರಿಣಾಮಗಳಿಂದ ದೂರವಿಡುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಶಾಮುಕ್ತ ಜೀವನವೇ ಆರೋಗ್ಯಪೂರ್ಣ ಜೀವನ. ಇಂದು ಇಲ್ಲಿ ಸೇರಿರುವ ನೀವು 12,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು—‘ನಾನು ಯಾವುದೇ ದುಶ್ಚಟಗಳಿಗೆ ಒಳಗಾಗುವುದಿಲ್ಲ, ಡ್ರಗ್ ಫೆಡ್ಲರ್‌ಗಳ ಬಲೆಗೆ ಬೀಳುವುದಿಲ್ಲ, ನನ್ನ ಸ್ನೇಹಿತರನ್ನೂ ವ್ಯಸನಕ್ಕೆ ನೂಕುವುದಿಲ್ಲ, ಕ್ಯಾಂಪಸ್‌ನಲ್ಲಿ ಯಾವುದೇ ಮಾದಕ ವಸ್ತು ಕಂಡುಬಂದರೂ ಸುಮ್ಮನಿರುವುದಿಲ್ಲ” ಎಂದು ಪ್ರತಿಜ್ಞೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಸಾವಿರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಉತ್ಸಾಹಭರಿತವಾಗಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅಂಗಾಂಗ ದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಘೋಷಣೆಗಳನ್ನು ಕೂಗುತ್ತ ಜಾಗೃತಿ ಮೂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು