4:30 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಕನ್ನಡದ ಪ್ರಸಿದ್ಧ ಹಾಸ್ಯ ನಟ ಉಮೇಶ್ ನಿಧನ: ಮುಖ್ಯಮಂತ್ರಿ ಸಹಿತ ಗಣ್ಯರ ಸಂತಾಪ

30/11/2025, 16:46

ಬೆಂಗಳೂರು(reporterkarnataka.com): ಕನ್ನಡ ಪ್ರಸಿದ್ದ ಹಾಸ್ಯ ನಟ ಉಮೇಶ್ ಅವರು ಇಂದು ನಿಧನರಾದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ 80ರ ಹರೆಯದ ಅವರು ಇಂದು ಕೊನೆಯುಸಿರೆಳೆದರು. ಉಮೇಶ್ ಅವರು ರಂಗನಟನಾಗಿದ್ದು, 900ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಾರೆ.
*ಸಿಎಂ ಸಹಿತ ಗಣ್ಯರ ಸಂತಾಪ:* ಸುಮಾರು 900 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಾಸ್ಯ ನಟರಾಗಿದ್ದ ಉಮೇಶ್ ರವರ ನಿಧನದಿಂದ ದು:ಖ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು.

ಅವರು ಇಂದು ಚಲನಚಿತ್ರ ನಟ ಉಮೇಶ್ ರವರ ಪಾರ್ಥೀವ ಶರೀರವನ್ನು ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ರವರ ನಿಧನರಾಗಿದ್ದಾರೆ. ಮೈಸೂರಿನವರಾದ ಉಮೇಶ್ ರವರು ತಮ್ಮ ಕಿರಿಯ ವಯಸ್ಸಿನಲ್ಲಿಯೇ ರಂಗಭೂಮಿಯ ನಟರಾಗಿ, ನಂತರ ಚಲನಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಸುಮಾರು 900 ಚಿತ್ರಗಳಲ್ಲಿ ಅಭಿನಯಿಸಿದ ಅನುಭವವಿರುವ ಉಮೇಶ್ ರವರು ಹಾಸ್ಯನಟರಾಗಿ ಖ್ಯಾತರಾಗಿದ್ದರು. 80 ವರ್ಷ ವಯಸ್ಸಿನ ಉಮೇಶ್ ರವರು ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದು, ಅವರ ಕೋರಿಕೆ ಮೇರೆಗೆ ಉಚಿತ ಕ್ಯಾನ್ಸರ್ ಚಿಕಿತ್ಸೆಗೆ ಸರ್ಕಾರದಿಂದ ನೆರವು ನೀಡಲಾಗಿತ್ತು ಎಂದರು.
ಉಮೇಶ್ ರವರ ಶ್ರೀಮತಿಯವರು ಅನಾರೋಗ್ಯದಿಂದ ಬಳಲುತ್ತಿದ್ದು, ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಮುಖ್ಯಮಂತ್ರಿಗಳು, ಕನ್ನಡ ಚಿತ್ರರಂಗದ ಮೇರುನಟನನ್ನು ಕಳೆದುಕೊಂಡಿರುವುದು ಅತೀವ ದು:ಖ ತಂದಿದ್ದು, ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಯವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು