6:00 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್: ದೆಹಲಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ

02/12/2025, 17:45

ನವದೆಹಲಿ(reporterkarnataka.com): ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.
ನವ ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ಹೊರಬೀಳಲಿದೆ. ಇವರಿಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದರೆ ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ ಎನ್ನುವುದು ನಮ್ಮ ಕಾಳಜಿ. ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಇಚ್ಚೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಯಿತು. ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಗೊಂದಲ ನಿವಾರಿಸುವಲ್ಲಿ ವಿಫಲವಾಗಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಿದೆ ಕಾಂಗ್ರೆಸ್ ಹೈಕಮಾಂಡ್, ಯಾರು ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ತಮ್ಮ ಮೇಲೆ ಹೈಕಮಾಂಡ್ ಇದೆ ಎಂದು ಹೇಳಿದ ಮೇಲೆ ಹೈಕಮಾಂಡ್ ಗೆ ಏನು ಅರ್ಥ ಇದೆ. ಇದು ಒಂದು ಕುಟುಂಬದ ವಿಷಯ ಆಗಿದೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು