1:24 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ತುಮಕೂರು ವಿಶ್ವವಿದ್ಯಾಲಯಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಲು ಮನವಿ

03/12/2025, 12:56

ಬೆಂಗಳೂರು(reporterkarnataka.com): ಪ್ರತಿಷ್ಠಿತ ತುಮಕೂರು ವಿಶ್ವವಿದ್ಯಾಲಯಕ್ಕೆ ಸಿದ್ಧಗಂಗೆಯ ಡಾ.ಶಿವಕುಮಾರ ಮಹಾಸ್ವಾಮಿಗಳ ಹೆಸರಿಡಲು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಮನವಿ ಮಾಡಿದ್ದಾರೆ.
ಈ ಕುರಿತು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರಿಗೆ ಲಿಖಿತ ಮನವಿ ಪತ್ರವನ್ನು ಕುಲಪತಿಗಳ ಮೂಲಕ‌ ಸಲ್ಲಿಸಿರುವ ಅವರು,ಕರ್ನಾಟಕ ರಾಜ್ಯದ ವಿಶ್ವವಿದ್ಯಾನಿಲಯಗಳಿಗೆ ಮಹಾತ್ಮರುಗಳ ಹೆಸರಿಡುವ ಪದ್ಧತಿ ರೂಡಿಯಲ್ಲಿದ್ದು, ಅದರಂತೆ ಸರ್ಕಾರವು ಆಗಾಗ ಸುತ್ತೋಲೆ, ಅಧಿಸೂಚನೆಗಳನ್ನು ಹೊರಡಿಸುತ್ತ ಬಂದಿರುತ್ತದೆ. ಇತ್ತೀಚೆಗೆ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡುವ ಸಂದರ್ಭದಲ್ಲಿ ಸದನದಲ್ಲಿ ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸುರೇಶಗೌಡ ರವರು ಡಾ.ಶಿವಕುಮಾರಸ್ವಾಮಿಗಳ ಹೆಸರನ್ನು ಇಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.

ತುಮಕೂರು ಜಿಲ್ಲೆಯು ಪ್ರಮುಖ ಶೈಕ್ಷಣಿಕ ಹಾಗೂ ಧಾರ್ಮಿಕ ಕೇಂದ್ರವಾಗಿದಕ್ಕೆ ಕಾರಣವಾದ ಸಂಸ್ಥೆಗಳ ಸಿಂಹಪಾಲು ಡಾ. ಶಿವಕುಮಾರ ಸ್ವಾಮಿಗಳ ನೇತೃತ್ವ ಹಾಗೂ ಸಿದ್ದಗಂಗಾ ಮಠದ್ದಾಗಿದೆ. ತ್ರಿವಿಧ ದಾಸೋಹಿ ಸಮೈಕ್ಯ ಭಾವವನ್ನು ಹೊಂದಿ ಜಾತಿ, ಕುಲ,ಧರ್ಮ ಎಲ್ಲವನ್ನೂ ಮೀರಿ ಶಿಕ್ಷಣ ರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಶತಾಯುಷಿಗಳಾಗಿದ್ದ ಡಾ. ಶಿವಕುಮಾರಸ್ವಾಮಿಗಳ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ಇಡುವುದು ಅತ್ಯಂತ ಸೂಕ್ತ ಎಂದು ಅವರು ತಮ್ಮ ಮನವಿಯಲ್ಲಿ ವಿವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು