ಇತ್ತೀಚಿನ ಸುದ್ದಿ
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು
03/12/2025, 13:01
ಮಂಗಳೂರು(reporterkarnataka.com): ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಸಿಎಂ ಹಾಗೂ ಡಿಸಿಎಂ 2 ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ನಂತರ ಕೈ ನಾಯಕರ ನಡೆ ಬಹಳ ಕುತೂಹಲ ಮೂಡಿಸಿದೆ.
ಮಂಗಳೂರಿಗೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಆಗಮಿಸಿದ್ದು, ಈ ವೇಳೆ ಕೈ ಕಾರ್ಯಕರ್ತರು ಡಿ.ಕೆ… ಡಿಕೆ ಎಂದು ಕೂಗಿದ ಪ್ರಸಂಗ ನಡೆಯಿತು.
ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಈ ಘಟನೆ ನಡೆದಿದೆ.


ಮಂಗಳೂರು ವಿವಿಯಲ್ಲಿ ಆಯೋಜಿಸಿರುವ ಮಹಾತ್ಮ ಗಾಂಧಿ ನಾರಾಯಣ ಗುರು ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ವೇಣುಗೋಪಾಲ್ ಅವರನ್ನ ಕಾರ್ಯಕರ್ತರು ಸ್ವಾಗತಿಸಿದರು. ಮತ್ತು ಡಿಕೆ ಡಿಕೆ ಎಂದು ಘೋಷಣೆ ಕೂಗಿದರು. ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ ಕೂಡ ಭೇಟಿ ನೀಡಿದ್ದು, ವೇಣುಗೋಪಾಲ್ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದಾರೆ.












