7:29 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಗಣೇಶ ಹಬ್ಬ; ಕರ್ನಾಟಕ ಚಿತ್ರಕಲಾ ಪರಿಷತ್ತಿನಿಂದ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ, ಮಾರಾಟ ಮೇಳ

03/09/2021, 08:32

ಬೆಂಗಳೂರು(reporterkarnataka.com): ಮುಂಬರುವ ಗೌರಿ ಹಾಗೂ ಗಣೇಶ ಚತುರ್ಥಿಯ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ “ದ ಸೋಕ್‌ ಮಾರ್ಕೇಟ್” ನ್ನು ಆಯೋಜಿಸಲಾಗಿದೆ. 

ಸೆಪ್ಟೆಂಬರ್‌ 3 ರಿಂದ ಪ್ರಾರಂಭವಾಗಲಿರುವ ಈ ಮೇಳದಲ್ಲಿ ವಿವಿಧ ಲೋಹಗಳ ಗಣೇಶ ಮೂರ್ತಿಗಳ ಪ್ರದರ್ಶನ ಹಾಗೂ ಮಾರಾಟ ವಿಶೇಷವಾಗಿರಲಿದೆ. 

ಸೆಪ್ಟೆಂಬರ್‌ 12ರ ವರೆಗೆ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿರುವ ಈ ಮೇಳದಲ್ಲಿ ಕೋವಿಡ್‌ ಹರಡದಂತೆ ಎಲ್ಲ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವೇಶ ಉಚಿತವಾಗಿದೆ. ಮುಂಬರುವ ಹಬ್ಬಗಳಿಗೆ ಬೇಕಾಗಿರುವ ಎಲ್ಲ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ. ಅಲಂಕಾರಿಕ ವಸ್ತುಗಳ ಜತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. 

ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಅದರಲ್ಲೂ ಗಣೇಶನ ಮೂರ್ತಿಗಳು ಈ ಬಾರಿಯ ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೆನಿನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಆಯೋಜಿಸಿರುವ ಈ ಮೇಳದ ಪ್ರಮುಖ ಉದ್ದೇಶ ಕುಶಲಕರ್ಮಿಗಳನ್ನು ಉತ್ತೇಜಿಸಿ ಅವರಿಗೊಂದು ಮಾರುಕಟ್ಟೆ ಕಲ್ಪಿಸುವುದಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕೋರಿದೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

96118 35597 / 6364 685 716

ಇತ್ತೀಚಿನ ಸುದ್ದಿ

ಜಾಹೀರಾತು