7:51 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಡ್ರಗ್ಸ್ ಮಾರಾಟ: 4 ಮಂದಿ ಆರೋಪಿಗಳ ಬಂಧನ; 50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ

06/12/2025, 19:52

ಮಂಗಳೂರು(reporterkarnataka.com): ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು 50 ಲಕ್ಷ ರೂ. ಮೌಲ್ಯದ ಸುಮಾರು 517.76 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನೇತೃತ್ವದಲ್ಲಿ ಸಿಸಿಬಿಯ ತಂಡವು ಖಚಿತ ಮಾಹಿತಿ ಸಂಗ್ರಹಿಸಿ ಡಿ.6ರಂದು ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರಾಮ್ ಶೆಟ್ಟಿ ಕನ್ವಿನ್ಷನ್ ಹಾಲ್ ಬಳಿ ಒಂದು ಕಾರಿನಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವೇಳೆ ದಾಳಿ ನಡೆಸಿ ನಾವುಂದ ನಿವಾಸಿ ಮೊಹಮ್ಮದ್ ಶಿಯಾಬ್ ಅಲಿಯಾಸ್ ಶಿಯಾಬ್ ,ನರಿಂಗಾನ ನಿವಾಸಿ ಮೊಹಮ್ಮದ್ ನೌಷದ್ ಅಲಿಯಾಸ್ ನೌಷದ್,ಕಸಬಾ ಬೆಂಗ್ರೆ ನಿವಾಸಿ ಇಮ್ರಾನ್ ಅಲಿಯಾಸ್ ಇಂಬ, ಮಂಗಳೂರು ಹಾಗೂ ಬ್ರಹ್ಮರ ಕೊಟ್ಲು ನಿವಾಸಿ ನಿಸಾರ್ ಅಹಮ್ಮದ್ ಅಲಿಯಾಸ್ ನಿಸಾರ್ ಎಂಬವರನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ ಸುಮಾರು 50 ಲಕ್ಷ ರೂ. ಮೌಲ್ಯದ ಸುಮಾರು 517.76 ಗ್ರಾಂ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ 10 ಲಕ್ಷ ಮೌಲ್ಯದ ನೀಲಿ ಬಣ್ಣದ ಮಾರುತಿ ಕಂಪನಿಯ FRONX ಮಾದರಿಯ ಕೆಎ-70-ಎಮ್ -7115 ಕಾರು, ಹಾಗೂ 5 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತುವನ್ನು ಆರೋಪಿತರು ಬೆಂಗಳೂರಿನಲ್ಲಿ ಒಬ್ಬ ನೈಜೀರಿಯಾ ದೇಶದ ವ್ಯಕ್ತಿಯಿಂದ ತಂದು ಮಂಗಳೂರು ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶದಿಂದ ತಂದಿರುವುದಾಗಿ ತಿಳಿದು ಬಂದಿರುತ್ತದೆ. ಆರೋಪಿತರ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು