5:24 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ

06/12/2025, 20:56

ಬೆಂಗಳೂರು(reporterkarnataka.com): ಹೆಚ್ಚುತ್ತಿರುವ ಮನೋವೈದ್ಯಕೀಯ ಮತ್ತು ಮಾನಸಿಕ ಅಸ್ವಸ್ಥತೆಗಳ ಸವಾಲು ಎದುರಿಸಲು ವಿಶೇಷ ನವೀಕೃತ ಮತ್ತು ನಾವೀನ್ಯತಾ ಪ್ರಯತ್ನಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಹೇಳಿದ್ದಾರೆ.
ನರ ರೋಗಗಳು, ಸೋಂಕುಗಳು, ಮಾನಸಿಕ ಆರೋಗ್ಯ ಸಮಸ್ಯೆಗಳು, ತಾಯಿ ಮತ್ತು ಮಕ್ಕಳ ಮಾನಸಿಕ ಸಮಸ್ಯೆಗಳು, ಹದಿಹರೆಯದವರ ಆತ್ಮಹತ್ಯೆಗಳು, ಮಾದಕ ದ್ರವ್ಯ ಬಳಕೆಯ ಅಸ್ವಸ್ಥತೆಗಳು ಮತ್ತು ವೃದ್ಧಾಪ್ಯದ ಮಾನಸಿಕ ಆರೋಗ್ಯ ಸೇವೆಗಳನ್ನು ಒದಗಿಸಲು ವಿಶೇಷ ಸೌಲಭ್ಯ ಒದಗಿಸಬೇಕಾಗಿದೆ ಎಂದು ಸಚಿವರು ತಿಳಿಸಿದರು.
ಶನಿವಾರ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) 28 ನೇ ಘಟಿಕೋತ್ಸವದಲ್ಲಿ ಭಾಷಣ ಮಾಡಿದ ಡಾ. ಪಾಟೀಲ್, ಮೈಸೂರು ಮತ್ತು ಕಲಬುರಗಿಯಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದೆ. “ಕರ್ನಾಟಕದಲ್ಲಿ ಮಾತ್ರವಲ್ಲ, ದೇಶಾದ್ಯಂತ ನಿಮ್ಹಾನ್ಸ್ ಮಾದರಿಯ ಸಂಸ್ಥೆಯನ್ನು ಸ್ಥಾಪಿಸಬೇಕು” ಎಂದು ಕರೆ ನೀಡಿದರು.
ನವದೆಹಲಿಯಿಂದ ಆನ್‌ಲೈನ್‌ನಲ್ಲಿ ಹಾಜರಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಕುರಿತು ಸಚಿವರು ಮನವಿ ಸಲ್ಲಿಸಿದರು.


ಕರ್ನಾಟಕವು ಒದಗಿಸಿದ ಭೂಮಿ ಮತ್ತು ಕೇಂದ್ರ ಹಣಕಾಸು ಸಚಿವಾಲಯದ ಅನುಮೋದನೆಯಿಂದ ಬೆಂಗಳೂರಿನ ಕ್ಯಾಲ್ಸನಹಳ್ಳಿಯಲ್ಲಿ ಪಾಲಿಟ್ರಾಮಾ ಕೇಂದ್ರವಾಗಿ ಹೊಸ ಉತ್ತರ ಕ್ಯಾಂಪಸ್ ಅನ್ನು ನಿರ್ಮಿಸಲಾಗುತ್ತದೆ. ನಿಮ್ಹಾನ್ಸ್‌ನಲ್ಲಿ ಹೊಸ ಹೊರರೋಗಿ ವಿಭಾಗ (OPD) ಸಂಕೀರ್ಣವನ್ನು ಮಂಜೂರು ಮಾಡಿದ್ದಕ್ಕಾಗಿ ಕೇಂದ್ರ ಹಣಕಾಸು ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ಎರಡು ಟೆಲಿ-ಮನಸ್ ಘಟಕಗಳು (ನಿಮ್ಹಾನ್ಸ್ ಮತ್ತು ಧಾರವಾಡದಲ್ಲಿ) ನಿರ್ವಹಿಸುತ್ತಿದೆ ಮತ್ತು ನಿಮ್ಹಾನ್ಸ್ ಅನ್ನು ಉನ್ನತ ಕೇಂದ್ರವಾಗಿಟ್ಟುಕೊಂಡು ನರವೈಜ್ಞಾನಿಕ ಆರೈಕೆಗೆ ಕರ್ನಾಟಕ ಬ್ರೈನ್ ಹೆಲ್ತ್ ಇನಿಶಿಯೇಟಿವ್ (Ka-BHI) ಅನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಮತ್ತು ದೇಶದಲ್ಲಿ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರ ಉನ್ನತೀಕರಣಕ್ಕೆ ರಾಜ್ಯ ಸರ್ಕಾರವು ನಿಮ್ಹಾನ್ಸ್ ಮತ್ತು ಅದರ ವೃತ್ತಿಪರರೊಂದಿಗೆ ಸದಾ ಬೆನ್ನಿಗಿರುತ್ತದೆ. ಇದು ನಮ್ಮ ಬದ್ಧತೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು