1:15 PM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಹಣಕ್ಕಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ವಿಧಾನ ಪರಿಷತ್ ನಲ್ಲಿ ಸಚಿವ ದಿನೇಶ್ ಗುಂಡೂರಾವ್

08/12/2025, 15:27

ಬೆಳಗಾವಿ ಸುವರ್ಣಸೌಧ,(reporterkarnataka.com): ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆಪಿಎಂಇbಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು.
ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ.
ಹಾಗೂ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ.
ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ ಪಿ ಎಂ ಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು.
ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು,ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ, ಅಧಿನಿಯಮದ ಸೆಕ್ಷನ್15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು