3:52 PM Wednesday10 - December 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ…

ಇತ್ತೀಚಿನ ಸುದ್ದಿ

Kodagu | ದೇಶದಲ್ಲಿ ಶುದ್ಧ ಗಾಳಿಯ ನಗರ: ಮಡಿಕೇರಿಗೆ ಟಾಪ್‌ 10ನಲ್ಲಿ ಸ್ಥಾನ

09/12/2025, 13:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmsil.com

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಬಿಡುಗಡೆ ಮಾಡಿರುವ ದೇಶದಲ್ಲಿ ಶುದ್ಧಗಾಳಿ ಲಭ್ಯವಿರುವ ಪ್ರಮುಖ ನಗರಗಳ ಟಾಪ್ 10 ನಗರಗಳ ಪೈಕಿ ಕೊಡಗು ಜಿಲ್ಲೆಯ ಮಡಿಕೇರಿ ನಗರ 10ನೇ ಸ್ಥಾನ ಪಡೆದಿದೆ.
ದೇಶದಲ್ಲಿ ಶುದ್ಧ ಗಾಳಿ ಸಿಗುತ್ತಿರುವ ನಗರಗಳು ಮತ್ತು ಮಾಲಿನ್ಯ
ಶುದ್ಧ ಗಾಳಿ ಎಂಬುದೇ ಮರೀಚಿಕೆಯಾಗಿರುವ ಕಾಲಘಟ್ಟದಲ್ಲಿ ಕರ್ನಾಟಕದ ಮೂರು ನಗರಗಳು ರಾಷ್ಟ್ರ ಮಟ್ಟದಲ್ಲಿ ಶುದ್ಧಗಾಳಿ ಲಭ್ಯವಿರುವ ಪ್ರಮುಖ 10 ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಪಟ್ಟಿಯೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶುದ್ಧ ಗಾಳಿ ಲಭ್ಯವಿರುವ ದೇಶದ ಪ್ರಮುಖ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 
ದೇಶದಲ್ಲಿ ಶುದ್ಧ ಗಾಳಿ ಸಿಗುತ್ತಿರುವ ನಗರಗಳು ಮತ್ತು ಮಾಲಿನ್ಯ ಪ್ರಮಾಣ ಕಳಪೆ ಮಟ್ಟಕ್ಕೆ ಕುಸಿದ ನಗರಗಳ ಪಟ್ಟಿಯನ್ನು ಮಂಡಳಿ ಬಿಡುಗಡೆ ಮಾಡಿದೆ.
ಡಿ. 7ರ ಮಾಹಿತಿಯಂತೆ ತಮಿಳುನಾಡಿನ ಹಲವು ನಗರಗಳು ಉತ್ತಮ ಗಾಳಿಯ ಗುಣಮಟ್ಟ ಹೊಂದಿವೆ ಎಂದು ಮಂಡಳಿಯ ದಾಖಲೆಗಳು ಹೇಳುತ್ತವೆ. ಇದರಲ್ಲಿ ಅಗ್ರ ಸ್ಥಾನದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಶ್ರೀ ವಿಜಯಪುರಂ ಇದೆ.
ನಂತರದ ಸ್ಥಾನದಲ್ಲಿ ಸಿಕ್ಕಿಂನ ಗ್ಯಾಂಗ್ಟಕ್‌ ಹಾಗೂ ಬಿಹಾರದ ಬೆಗುಸರಾಯ್‌ ಕ್ರಮವಾಗಿ 2 ಹಾಗೂ 3ನೇ ಸ್ಥಾನದಲ್ಲಿವೆ.
ನಂತರದ ಸ್ಥಾನದಲ್ಲಿ ಮಧ್ಯಪ್ರದೇಶದ ಡಾಮೋಹ್ ಐಜ್ವಾಲ್‌, ರಾಮನಾಥಪುರಂ ಹಾಗೂ ಜಾನ್ಸಿ ನಗರಗಳಿವೆ.
ಕರ್ನಾಟಕದ ಮೂರು ನಗರಗಳಲ್ಲಿನ ಗಾಳಿಯ ಗುಣಮಟ್ಟ ಉತ್ತವಾಗಿದೆ. ಇದರಲ್ಲಿ ಚಿಕ್ಕಮಗಳೂರು 5ನೇ, ಚಾಮರಾಜನಗರ 8ನೇ ಹಾಗೂ ಮಡಿಕೇರಿ 10ನೇ ಸ್ಥಾನದಲ್ಲಿವೆ.

ಇತ್ತೀಚಿನ ಸುದ್ದಿ

ಜಾಹೀರಾತು