7:31 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್ ಸ್ಥಿತಿ ಗಂಭೀರ

09/12/2025, 15:38

ರಾಯಚೂರು(repprterkarnataka.com): ಜಿಲ್ಲೆಯ ದೇವದುರ್ಗ ಬಳಿ ಕೆಎಸ್ ಆರ್‌ಟಿಸಿ(ಕಲ್ಯಾಣ ಕರ್ನಾಟಕ) ಬಸ್ ಅತಿವೇಗದಿಂದಾಗಿ ಪಲ್ಟಿಯಾಗಿದ್ದು, 15 ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಸ್ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.


ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಂಚೆಸುಗೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಕೆಆರ್‌ಟಿಸಿ (ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಬಸ್ಸೊಂದು ಪಲ್ಟಿಯಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸುಮಾರು 15 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.ಈ ಘಟನೆಯಲ್ಲಿ ಬಸ್‌ನ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಘಟನೆ ಇಂದು ದೇವದುರ್ಗ ಠಾಣಾ ವ್ಯಾಪ್ತಿಯ ಅಂಚೆಸುಗೂರು ಗ್ರಾಮದಿಂದ ದೇವದುರ್ಗ ಪಟ್ಟಣಕ್ಕೆ ಹೊರಟಿದ್ದ ಕೆಕೆಆರ್‌ಟಿಸಿ ಬಸ್‌ನಲ್ಲಿ ನಡೆದಿದೆ. ಅಂಚೆಸುಗೂರು ಗ್ರಾಮದಿಂದ ಸ್ವಲ್ಪ ದೂರದಲ್ಲಿ, ಬಸ್ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು