12:05 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್

10/12/2025, 16:10

ಬೆಳಗಾವಿ ಸುವರ್ಣವಿಧಾನಸೌಧ(reporterkarnataka.com): ರಾಜ್ಯದಲ್ಲಿ 37,48,700 ವಸತಿ ರಹಿತರು ಇದ್ದಾರೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಜಡ್. ಜಮೀರ್ ಅಹಮದ್ ಖಾನ್ ಹೇಳಿದರು.
ಅವರು ವಿಧಾನ ಪರಿಷತ್‍ನಲ್ಲಿ ಸದಸ್ಯ ಶಿವಕುಮಾರ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2018ರಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಸತಿ/ನಿವೇಶನ ರಹಿತರ ಸಮೀಕ್ಷೆ ಹಾಗೂ 2017ರಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯಡಿ ನಗರ ಪ್ರದೇಶದಲ್ಲಿ ವಸತಿ/ನಿವೇಶನ ರಹಿತರ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಯಲ್ಲಿ ರಾಜ್ಯದಲ್ಲಿ ಒಟ್ಟು 37,48,766 ವಸತಿ ರಹಿತರು ಕಂಡು ಬಂದಿದ್ದು, ಇದರಲ್ಲಿ 17,31,633 ನಿವೇಶನ ರಹಿತರು ಮತ್ತು 20,17,133 ವಸತಿ ರಹಿತರು ಇದ್ದಾರೆ ಎಂದರು.
2024-2025ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಗಳಡಿ ಒಟ್ಟು 7,38,881 ಮನೆಗಳ ಗುರಿ ನೀಡಿದ್ದು, ಇವುಗಳಲ್ಲಿ 3,27,747 ಅನುಮೋದನೆಗೊಂಡಿರುತ್ತವೆ. 411134 ಮನೆಗಳು ಅನುಮೋದನೆಗೆ ಬಾಕಿಯಿವೆ ಎಂದು ಅವರು ನುಡಿದರು‌.
ರಾಜ್ಯದಲ್ಲಿ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದವರಿಗೆ ರೂ. 4 ಲಕ್ಷ ಮತ್ತು ಸಾಮಾನ್ಯ ವರ್ಗದವರಿಗೆ ರೂ. 3.5 ಲಕ್ಷ ಕ್ಕೆ ಹೆಚ್ಚಳ ಮಾಡುವ ಚಿಂತನೆ ಇದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು