5:20 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

11/12/2025, 15:25

ನವದೆಹಲಿ(reporterkarnataka.com): “ಆರೆಸ್ಸೆಸ್ ಶಬ್ದ ಕೇಳಿದರೆ ಸಾಕು ಉರಿದುಬಿಡುತ್ತಿದ್ದ ಕಾಂಗ್ರೆಸ್ಸಿಗರಿಗೆ ಇದೀಗ ಅವರ ಸರ್ಕಾರದಿಂದಲೇ ತಕ್ಕ ಉತ್ತರ ಸಿಕ್ಕಿದೆ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿರುಗೇಟು ಕೊಟ್ಟಿದ್ದಾರೆ.
ಕರ್ನಾಟಕದಲ್ಲಿ ಬೃಹತ್ತಾಗಿ 518 ಆರೆಸ್ಸೆಸ್ ಪಥಸಂಚಲನ ಕಾರ್ಯಕ್ರಮಗಳು ಅತ್ಯಂತ ಶಿಸ್ತುಬದ್ಧವಾಗಿ ಯಶಸ್ವಿಗೊಂಡಿವೆ. ಕಾಂಗ್ರೆಸ್ಸಿಗರು ಮಾಡಿದ ಅಪಪ್ರಚಾರಕ್ಕೆ ಇದು ತಕ್ಕ ಉತ್ತರವಾಗಿದೆ ಎಂದಿದ್ದಾರೆ ಜೋಶಿ.
ರಾಷ್ಟ್ರೀಯ ಸ್ವಯಂ ಸೇವಕರ ಪಥಸಂಚಲನಕ್ಕೆ ಅವಕಾಶ ಕೊಟ್ಟರೆ ಗದ್ದಲ, ಗಲಾಟೆ, ಕೋಮು ಗಲಭೆಗೆ ಕಾರಣವಾಗುತ್ತದೆ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಲೇ ಇತ್ತು. ಆದರೆ, ರಾಜ್ಯದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಪಥಸಂಚಲನ ನಡೆಸಿದ್ದರೂ ಅಂತಹ ಯಾವುದೇ ಅಹಿತಕರ ವಾತಾವರಣ ಉಂಟಾಗಿಲ್ಲ ಎಂದು ಜೋಶಿ ನುಡಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹೆಸರು ಕೇಳಿದರೆ ಸಾಕು ಕಾಂಗ್ರೆಸ್ ನಾಯಕರಿಗೆ ಮೈ ಉರಿಯುತ್ತದೆ. ಇಂಥವರಿಗೆ ಇದೀಗ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವೇ ತಕ್ಕ ಉತ್ತರ ನೀಡಿದೆ‌ ಎಂದು ಕಾಂಗ್ರೆಸ್ ನಾಯಕರಿಗೆ ತುಸು ಜೋಶ್ ಆಗಿಯೇ ಟಾಂಗ್ ಕೊಟ್ಟಿದ್ದಾರೆ.
ಆರ್ ಎಸ್ ಎಸ್ ಸಂಘಟನೆಗೆ ಪಥಸಂಚಲನಕ್ಕೆ ಅನುಮತಿ ನೀಡಿದರೆ ಗಲಾಟೆ, ದೊಂಬಿ ಹಾಗೂ ಕೋಮು ಗಲಭೆಗಳಿಗೆ ದಾರಿಯಾಗುತ್ತದೆ‌ ಎಂಬ ಕಾಂಗ್ರೆಸ್ ನಾಯಕರ ಅಪಪ್ರಚಾರದ ನಡುವೆಯೂ ಧೃತಿಗೆಡದೆ ರಾಜ್ಯದಲ್ಲಿ ಬರೋಬ್ಬರಿ 518 ರಾಷ್ಟ್ರೀಯ ಪಥಸಂಚಲನ ಕಾರ್ಯಕ್ರಮಗಳನ್ನು ನಡೆಸಿದೆ. ಇದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಸ್ತಿಗೆ ಪ್ರತೀಕವಾಗಿದೆ ಮತ್ತು ‘ದೇಶ ಮೊದಲು, ದೇಶ ಸೇವೆಯೇ ಪರಮೋಚ್ಚ’ ಎಂಬ ಆರ್ ಎಸ್ ಎಸ್ ಸಿದ್ಧಾಂತವನ್ನು ಮತ್ತಷ್ಟು ಬಲವಾಗಿ ಪ್ರತಿಪಾದಿಸಿದೆ ಎಂದು ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ಸಿಗರು ಇನ್ನಾದರೂ ಪಾಠ ಕಲಿಯಲಿ. ಆರೆಸ್ಸೆಸ್ ಯಾವತ್ತೂ ರಾಷ್ಟ್ರೀಯ ಹಿತಕ್ಕಾಗಿ ಇರುವಂಥ ಒಂದು ಶತು ಮತ್ತು ಜಾಗೃತೆಯ ಸಂಘಟನೆಯೇ ಹೊರತು ಕೋಮುವಾದ ಬಿತ್ತುವುದು ಅದರ ಕೆಲಸವಲ್ಲ. ದೇಶವನ್ನು ಜಾಗೃತಗೊಳಿಸುವುದೇ ಅದರ ಧ್ಯೇಯ ಮತ್ತು ಶಕ್ತಿ ಎಂಬುದನ್ನು ಅರಿತುಕೊಳ್ಳಲಿ ಎಂದು ಸಚಿವ ಜೋಶಿ ಕಾಂಗ್ರೆಸ್ ನಾಯಕರಿಗೆ ತಿವಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು