5:20 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

11/12/2025, 19:59

ಬೆಳಗಾವಿ(reporterkarnataka.com): ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ನಿಗಮ ಮಂಡಳಿಗಳು ಸೇರಿದಂತೆ ಸುಮಾರು 2,84,881 ಹುದ್ದೆಗಳು ಖಾಲಿಯಿದ್ದು,ಇವುಗಳನ್ನು ಶೀಘ್ರ ಗತಿಯಲ್ಲಿ ತುಂಬಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಕೋರಿದ್ದರು.
ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ101420 ಹುದ್ದೆಗಳು, ವಿಶ್ವವಿದ್ಯಾಲಯಗಳ್ಲಲಿ 14677 ಹುದ್ದೆಗಳು ಒಟ್ಟು 188037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.
ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು