9:30 AM Friday12 - December 2025
ಬ್ರೇಕಿಂಗ್ ನ್ಯೂಸ್
ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ

ಇತ್ತೀಚಿನ ಸುದ್ದಿ

ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

12/12/2025, 09:28

ಬೆಂಗಳೂರು(reporterkarnataka.com): ಕಳೆದ ಒಂದು ತಿಂಗಳಲ್ಲಿ ಹಲವಾರು ತಾಂತ್ರಿಕ ವಲಯದಲ್ಲಿ ಬಹಳ ಪರಿಣಿತಿ ಹೊಂದಿರುವ ಕಂಪನಿಗಳಾದ ಮೈಕ್ರೊಸಾಫ್ಟ್‌, ಗೂಗಲ್, ಅಮೇಜಾನ್ ಕಂಪನಿಗಳು ಭಾರತ ಸರ್ಕಾರಕ್ಕೆ ದೊಡ್ಡ ಪ್ರಮಾಣದ ಹಣ ಹೂಡಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ಆಶಿರ್ವಾದದೊಂದಿಗೆ ಹಣ ಹೂಡಲು ಒಪ್ಪಂದ ಮಾಡಿಕೊಂಡಿವೆ. ಇದು ಭಾರತ ಪ್ರಬಲ ಆರ್ಥಿಕ ಶಕ್ತಿ ಎಂಬುದನ್ನು ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಈ ಸಂಸ್ಥೆಗಳಿಗೆ ಏನೆಲ್ಲ ಕಾನೂನು ಅಡಚಣೆ ಮಾಡಿದರೂ, ಭಾರತದ ನಾಯಕತ್ವ ನರೇಂದ್ರ ಮೋದಿಯವರ ಮೇಲೆ ನಂಬಿಕೆ ಇಟ್ಟು ಮತ್ತು ಭಾರತದಲ್ಲಿರುವ ತಾಂತ್ರಿಕ ಪರಿಣಿತ ಯುವಕರ ಮೇಲೆ ನಂಬಿಕೆ ಇಟ್ಟು ಹೂಡಿಕೆ ಮಾಡಿದ್ದಾರೆ. ಇದು ಅಭಿವೃದ್ದಿಗೆ ದೊಡ್ಡ ಇಂಬು ಕೊಡುವಂತದ್ದು, ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಎಫ್ ಡಿಐ ಹೂಡಿಕೆ ಆಗುತ್ತಿರುವುದು ಸಂತಸದ ಸಂಗತಿ. ಪ್ರಧಾನಿ ನರೇಂದ್ರ ಮೋದಿಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಹಾಗೂ ಎಲ್ಲ ಕಂಪನಿಗಳಿಗೆ ಶುಭ ಕೋರುತ್ತೇನೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು