4:52 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮೆಕ್ಕೆಜೋಳದ ಬೆಲೆಕುಸಿತಕ್ಕೆ ಕ್ರಮ ಕೈಗೊಳ್ಳಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

12/12/2025, 10:37

ನವದೆಹಲಿ(reporterkarnataka.com): ಮೆಕ್ಕೆಜೋಳದ ಬೆಲೆಯಲ್ಲಿನ ತೀವ್ರ ಕುಸಿತವನ್ನು ಪರಿಹರಿಸಲು ತುರ್ತು ಹಸ್ತಕ್ಷೇಪದ ಅವಶ್ಯಕತೆ ಕುರಿತು‌ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಗುರುವಾರ ನಡೆದ ಸಂಸತ್ತಿನ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಾತನಾಡಿದರು.
ದೇಶದ ಬೆನ್ನೆಲುಬು ಮತ್ತು ಅನ್ನದಾತರಾದ ರೈತರ ತುರ್ತು ಅವಶ್ಯಕತೆ ಬಗ್ಗೆ ಕನ್ನಡದಲ್ಲಿ ಮಾತನಾಡುವ ಮೂಲಕ ಸದನದ ಗಮನಸೆಳೆದರು.
ಮೆಕ್ಕೆಜೋಳ ಬೆಳೆದ ರೈತರು ತೀವ್ರ ಸಂಕಷ್ಟವನ್ನು‌ ಎದುರಿಸುತ್ತಿದ್ದಾರೆ. ಅನುಕೂಲಕರ ಮಳೆಯಿಂದಾಗಿ, ಕರ್ನಾಟಕವು ಈ ಋತುವಿನಲ್ಲಿ ಸುಮಾರು 32 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಹೆಚ್ಚುವರಿಯಾಗಿ ಮಾರುಕಟ್ಟೆಗೆ ಯೋಗ್ಯವಾದ ಮೆಕ್ಕೆಜೋಳವನ್ನು ಉತ್ಪಾದಿಸಿದೆ ಎಂದರು.
ಕೇಂದ್ರ ಸರ್ಕಾರವು ಕ್ವಿಂಟಲ್‌ಗೆ ₹2,400 ಎಂ. ಎಸ್.ಪಿಯನ್ನು ಸೂಚಿಸಿದ್ದರೂ, ಕರ್ನಾಟಕ ಮತ್ತು ಇತರ ರಾಜ್ಯಗಳ ರೈತರು ತಮ್ಮ ಉತ್ಪನ್ನಗಳನ್ನು ಬೆಂಬಲ ಬೆಲೆಗಿಂತ ಕಡಿಮೆ ಮಾರಾಟ ಮಾಡುವ ಪರಿಸ್ಥಿತಿ ಒದಗಿದೆ.NAFED (ನ್ಯಾಷನಲ್ ಅಗ್ರಿಕಲ್ಬರಲ್ ಕೋಅಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್) ಮತ್ತು ಇತರ ಏಜೆನ್ಸಿಗಳ ಮೂಲಕ ಸಂಗ್ರಹಣೆಯು ಅಸಮರ್ಪಕವಾಗಿ ನಡೆಯುತ್ತಿದೆ ಹಾಗೂ
ಖರೀದಿ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸದೇ ಹಾಗೂ ನಿರ್ಬಂಧಿತ ಷರತ್ತುಗಳೊಂದಿಗೆ ಕಾರ್ಯ ನಿರ್ವಹಿಸುತ್ತಿರುವುದರಿಂದಾಗಿ ರೈತರನ್ನು ಖಾಸಗಿ ವ್ಯಾಪಾರಿಗಳ ಕೈಗೆ ತಳ್ಳುತ್ತದೆ ಮತ್ತು ಭಾರೀ ನಷ್ಟವನ್ನು ಉಂಟುಮಾಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದು ವಾಡಿಕೆಯ ಮಾರುಕಟ್ಟೆಯ ಏರಿಳಿತವಲ್ಲ ಆದರೆ MSP ಜಾರಿ ಮತ್ತು ಸಂಗ್ರಹಣೆ ಯೋಜನೆಯಲ್ಲಿ ವ್ಯವಸ್ಥಿತ ವೈಫಲ್ಯವಾಗಿದೆ,
ಇದು ನೇರವಾಗಿ ಗ್ರಾಮೀಣ ಜೀವನೋಪಾಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.MSP ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು, ಖರೀದಿ ಕೇಂದ್ರಗಳನ್ನು ವಿಸ್ತರಿಸಲು, ಆಮದುಗಳನ್ನು ನಿರ್ಬಂಧಿಸಲು, PDS ಮತ್ತು ಡಿಸ್ಟಿಲರಿಗಳಲ್ಲಿ ಹೆಚ್ಚುವರಿ ಎಥೆನಾಲ್ ಮಿಶ್ರಣ ತಯಾರಿಸುವ ಮೂಲಕ ಹೆಚ್ಚುವರಿ ಮೆಕ್ಕೆಜೋಳವನ್ನು ಬಳಸಿಕೊಳ್ಳಲು ಮತ್ತು ಬೆಲೆಗಳನ್ನು ಸ್ಥಿರಗೊಳಿಸಲು ಕಾಲಮಿತಿಯ ಯೋಜನೆಯನ್ನು ಘೋಷಿಸಲು ತಕ್ಷಣದ ಕ್ರಮಗಳ ಕುರಿತು ಸರ್ಕಾರ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದರು.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಶೂನ್ಯವೇಳೆಯ ಅವಧಿಯಲ್ಲಿ ರೈತರ ಸಮಸ್ಯೆಗಳನ್ನು ಕನ್ನಡದಲ್ಲೇ ಮಾತನಾಡುವ ಮೂಲಕ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸದನದ ಗಮನ ಸೆಳೆದಿದ್ದು ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು