11:00 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಬಿಎಸ್ಸೆನ್ನೆಲ್ ಟವರ್‌ಗಳಿಗೆ ಬ್ಯಾಟರಿ ಸೆಟ್‌ ತ್ವರಿತವಾಗಿ ಅಳವಡಿಸಲು ಸಂಸದ ಯದುವೀರ್‌ ಮನವಿ

13/12/2025, 11:41

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭೇಟಿ ಮಾಡಿದ ಮೈಸೂರು-ಕೊಡಗು ಸಂಸದರು,ಕೊಡಗು ಲೋಕಸಭಾ ಕ್ಷೇತ್ರದ ಕೊಡಗು ಜಿಲ್ಲೆಯಲ್ಲಿ ದೂರ ಸಂಪರ್ಕ ಕ್ಷೇತ್ರಕ್ಕೆ ಹೆಚ್ಚುವರಿ ಸೌಲಭ್ಯ ಒದಗಿಸಬೇಕಾದ ಅಗತ್ಯವಿರುವುದರಿಂದ ಕೂಡಲೇ ಟವರ್‌ಗಳಿಗೆ ಬ್ಯಾಟರಿ ಸೆಟ್‌ ಅಳವಡಿಕೆ ಹಾಗೂ 15 ಪವರ್‌ ಪ್ಲಾಂಟ್‌ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿ ಈ ಸಂಬಂಧ ಭೇಟಿ ಮಾಡಿ ಮತ್ತೊಮ್ಮೆ ಮನವಿ ನೀಡಿದ ನಂತರ ಯದುವೀರ್‌ ಒಡೆಯರ್‌ ಈ ಮಾಹಿತಿ ನೀಡಿದ್ದಾರೆ.
ಕಳೆದ ಭಾರಿ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಕಂಬಗಳು ಧರೆಗುರುಳಿದಿದ್ದು, ಇದರಿಂದ ಸಾರ್ವಜನಿಕರಿಗೆ ಸಂಪರ್ಕ ಸಾಧಿಸಲು ಭಾರಿ ತೊಂದರೆ ಎದುರಾಗಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸಚಿವರಿಗೆ ಪತ್ರ ಬರೆದು ಮೂಲ ಸೌಕರ್ಯ ಹೆಚ್ಚಿಸಲು ಆಗ್ರಹಿಸಲಾಗಿತ್ತು ಎಂದರು.
ಈ ನಿಟ್ಟಿನಲ್ಲಿ ಇಂದು ಕೇಂದ್ರ ಸಚಿವರನ್ನು ಮತ್ತೊಮ್ಮೆ ಭೇಟಿ ಮಾಡಿ ಈ ವಿಷಯವನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ, ಈ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮನವಿ ಮಾಡಿದ್ದೇನೆ ಎಂದು ಸಂಸದರು ವಿವರಿಸಿದರು.
ಇದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸಿರುವ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ, ಅತಿ ಶೀಘ್ರದಲ್ಲೇ ಈ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು