4:46 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಮೈಸೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ: ಸ್ಟಡಿಹೌಸ್ ನಲ್ಲಿ ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ: ಚಾಕುವಿನಿಂದ ಹಲ್ಲೆ

04/09/2021, 00:06

ಮೈಸೂರು (reporterkarnataka.com):

ಇಲ್ಲಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಸಾಂಸ್ಕೃತಿಕ ನಗರಿಯಲ್ಲಿ ಮತ್ತೊಂದು ತಲೆ ತಗ್ಗಿಸುವ ಘಟನೆ ನಡೆದಿದೆ. ಸ್ಟಡಿ ಹೌಸ್ ಬಳಿ ದುಷ್ಕರ್ಮಿಗಳು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆ ನಡೆಸಿದ್ದಾರೆ.

ಸ್ಟಡಿ ಹೌಸ್ ಒಳಗೆ ಪ್ರವೇಶಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆಗೈದು ಪರಾರಿಯಾಗಿದ್ದಾರೆ. ಸ್ಟಡಿ ಹೌಸ್ ನಲ್ಲಿ ಆಂಧ್ರಪ್ರದೇಶದ 7 ಮಂದಿ ವಿದ್ಯಾರ್ಥಿನಿಯರು ಇದ್ದರು. ಘಟನೆ ನಡೆದ ಸಂದರ್ಭದಲ್ಲಿ ಉಳಿದ

ವಿದ್ಯಾರ್ಥಿನಿಯರು ತರಗತಿಗೆ ಹೋಗಿದ್ದರು. 

ಒಬ್ಬಳೇ ವಿದ್ಯಾರ್ಥಿನಿ ಇರುವುದನ್ನು ಗಮನಿಸಿ ಅತ್ಯಾಚಾರಕ್ಕೆ ಯತ್ನಿಸಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಯುವತಿಯನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಘಟನಾ ಸ್ಥಳಕ್ಕೆನರಸಿಂಹರಾಜ ಠಾಣೆಯ ಪೊಲೀಸರು ಹಾಗೂ  ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ತನಿಖೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು