2:48 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಡಿಸಿಎಂ ಜೊತೆ ಸಂವಾದ | ಬಿಎಎಫ್‌ ಸಂತಸ; ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಮಂಡಿಸಿ: ಅಧ್ಯಕ್ಷ ಸತೀಶ್‌ ಮಲ್ಯ

13/12/2025, 19:41

ಬೆಂಗಳೂರು(reporterkarnataka.com): ಇಂದು ವಿಧಾನಸೌಧದ ಬ್ವಾಂಕ್ವೇಟ್‌ ಹಾಲ್‌ನಲ್ಲಿ ವಿಶೇಷ ಸಂವಾದ ಏರ್ಪಡಿಸಿ, ಅಪಾರ್ಟ್‌ಮೆಂಟ್‌ ಮಾಲೀಕರ ಸಲಹೆಗಳನ್ನು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌ ಆಲಿಸಿದ್ದು ಬಹಳ ಸಂತಸ ತಂದಿದೆ. ಆದರೆ, ಈ ಸಲಹೆಗಳನ್ನು ಶೀಘ್ರವಾಗಿ ವಿಧೇಯಕದಲ್ಲಿ ಅಳವಡಿಸಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಬೇಕು ಎನ್ನುವುದು ನಮ್ಮ ಮನವಿಯಾಗಿದೆ ಎಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ ಅಧ್ಯಕ್ಷ ಸತೀಶ್‌ ಮಲ್ಯ ತಿಳಿಸಿದ್ದಾರೆ.
ಸಂವಾದ ಕಾರ್ಯಕ್ರಮದ ನಂತರ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮ. 1972 ರಲ್ಲಿ ಜಾರಿಗೆ ಬಂದಿರುವಂತಹ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಕಾಯ್ದೆ ಬಹಳಷ್ಟು ಗೊಂದಲದಿಂದ ಕೂಡಿದೆ. ಇದನ್ನು ಸರಿಪಡಿಸಲು ಈಗಾಗಲೇ ಪ್ರಸ್ತಾಪಿಸಲಾಗಿರುವಂತಹ ಹೊಸ ಸಮಗ್ರ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಯಲ್ಲಿ ಉತ್ತಮ ಅಂಶಗಳನ್ನು ಅಳವಡಿಸಲಾಗಿದೆ. ಈ ಕಾಯ್ದೆ ಅನುಷ್ಠಾನ ಇಂದಿನ ತುರ್ತು ಅಗತ್ಯವಾಗಿದೆ. ಇಂದು ನಡೆದ ಸಂವಾದ ಕಾರ್ಯಕ್ರಮದಲ್ಲಿ ನಾವು ನೀಡಿರುವ ಸಲಹೆಗಳನ್ನು ಅಳವಡಿಸಿ, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲೀ ಮಂಡಿಸಬೇಕು. ಸರಿಯಾದ ಕಾಯ್ದೆಯ ಬೆಂಬಲವಿಲ್ಲದೆ ಅಪಾರ್ಟ್‌ಮೆಂಟ್‌ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಸಂವಾದ ಕಾರ್ಯಕ್ರಮ ನಮಗೆ ಸಂತಸ ತಂದಿದೆ. ಆದರೆ, ಈ ವಿಧೇಯಕವನ್ನು ಈ ಬಾರಿಯ ಅಧಿವೇಶನದಲ್ಲೇ ಮಂಡಿಸಿ ಜಾರಿಗೊಳಿಸುವುದು ಬಹಳ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಉಪಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎನ್ನುವುದು ನಮ್ಮ ಮನವಿಯಾಗಿದೆ ಎಂದು ಅಧ್ಯಕ್ಷರು ತಿಳಿಸಿದರು.

ಸಂವಾದ ಕಾರ್ಯಕ್ರಮದಲ್ಲಿ BAF ಪ್ರಧಾನ ಕಾರ್ಯದರ್ಶಿ ಕೆ. ಅರುಣ್ ಕುಮಾರ್, BAF ಖಜಾಂಚಿ ಕಿರಣ್ ಹೆಬ್ಬಾರ್ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಅಪಾರ್ಟ್‌ಮೆಂಟ್‌ ಮಾಲೀಕರು, ಫೆಡರೇಷನ್‌ ಪ್ರತಿನಿಧಿಗಳು ಭಾಗವಹಿಸಿ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು