8:06 PM Friday8 - May 2026
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು

ಇತ್ತೀಚಿನ ಸುದ್ದಿ

ಬಂಟ್ವಾಳ: ಮಾದಕ ವಸ್ತು ಮಾರಾಟಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ; 810 ಗ್ರಾಂ ಗಾಂಜಾ ವಶ

14/12/2025, 18:27

ಬಂಟ್ವಾಳ(reporterkarnataka.com): ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು 810 ಗ್ರಾಂ ಗಾಂಜಾ ಸ್ವಾಧೀನಪಡಿಸಿಕೊಂಡಿದ್ದಾರೆ.
ಬಂಟ್ವಾಳದ ತುಂಬೆ ಗ್ರಾಮದ ಹನಮನಗರ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾನುವಾರ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಮಂಜುನಾಥ ಟಿ, (ಪೊಲೀಸ್ ಉಪ ನಿರೀಕ್ಷಕರು (ಕಾ&ಸು) ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ) ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು KA-19-MN-3664 ನೇ ನೊಂದಣಿ ಸಂಖ್ಯೆಯ ಕಾರು ಮತ್ತು KA-19-AE-0166 ನೇ ನೊಂದಣಿ ಸಂಖ್ಯೆಯ ಆಟೋ ರಿಕ್ಷಾದ ಬಳಿ ಅನುಮಾನಾಸ್ಪದವಾಗಿ ನಿಂತುಕೊಂಡಿದ್ದು, ಅವರುಗಳನ್ನು ಹಿಡಿದು ವಿಚಾರಿಸಿದಾಗ ಒಬ್ಬಾತ ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಮತ್ತು ಮತ್ತೋರ್ವ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಎಂಬುದಾಗಿ ತಿಳಿಸಿರುತ್ತಾರೆ. ವಿಚಾರಣೆಯ ವೇಳೆ ತಾವುಗಳು ಅಧಿಕ ಹಣಗಳಿಸುವ ಉದ್ದೇಶದಿಂದ ನಿಷೇಧಿತ ಮಾದಕವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಒಪ್ಪಿಕೊಂಡಿದ್ದು, ತಪಾಸಣೆ ನಡೆಸಿದಾಗ ಕಾರಿನಲ್ಲಿ 450 ಗ್ರಾಂ. ಗಾಂಜಾ ಹಾಗೂ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿರುತ್ತದೆ.
ವಾಹನ ಹಾಗೂ 810 ಗ್ರಾಂ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸ್ವಾಧೀನಪಡಿಸಲಾಗಿದ್ದು, ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ ಕ್ರ : 183/2025 ಕಲಂ: 8(C), 20(B) ii (a) NDPS Act ಅಡಿಯಲ್ಲಿ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು