9:23 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ದಾವಣಗೆರೆ ಧನಿ ಶಾಮನೂರು ಶಿವಶಂಕರಪ್ಪ ನಿಧನ: ಸಿಎಂ ಸಹಿತ ಹಲವು ಗಣ್ಯರ ಸಂತಾಪ; ಇಂದು ಅಂತ್ಯಕ್ರಿಯೆ

15/12/2025, 09:18

ನವದೆಹಲಿ(reporterkarnataka.com): ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷ, ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಶಾಮನೂರ್ ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ದಾವಣಗೆರೆಯಲ್ಲಿ ಇಂದು ಮಧ್ಯಾಹ್ನ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ಶಾಮನೂರು ಶಿವಶಂಕರಪ್ಪ ಅವರು ಈ ಹಿಂದೆ ವಸತಿ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದ ಶಾಮನೂರು ಅವರು ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಮತ್ತು ಸಂಘಟನೆಯನ್ನು ಬಲಪಡಿಸಲು ಶ್ರಮಿಸಿದ್ದರು, ಅವರ ನಿಧನದಿಂದ ಒಬ್ಬ ಶ್ರೇಷ್ಠ ಮುತ್ಸದ್ದಿಯನ್ನು ಹಾಗೂ ಮಾರ್ಗದರ್ಶಕರನ್ನು ನಾವು ಕಳೆದುಕೊಂಡಿದ್ದೇವೆ ಎಂದು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರು ನಮ್ಮ ತಂದೆ ಭೀಮಣ್ಣ ಖಂಡ್ರೆ ಹಾಗೂ ತಮಗೆ ತುಂಬಾ ಆತ್ಮೀಯರಾಗಿದ್ದರು ಅವರ ನಿಧನದಿಂದ ಆಘಾತವಾಗಿದೆ ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಅತ್ಯಂತ ಹಿರಿಯ ಸದಸ್ಯರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಈ ನೋವಿನ ಸಂದರ್ಭದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಯಾದ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಅವರ ಕುಟುಂಬದ ಎಲ್ಲರಿಗೂ ಶಾಮನೂರ್ ಅಣ್ಣನವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು