10:20 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

16/12/2025, 14:44

ಬೆಳಗಾವಿ ಸುವರ್ಣಸೌಧ (reporterkarnataka.com): ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಿವಮೊಗ್ಗ ಶಾಸಕ ಚನ್ನಬಸಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ಈ ಹಿಂದಿನ ಸರ್ಕಾರದಲ್ಲಿ 545 ಪಿ.ಎಸ್.ಐ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಸದ್ಯ ಸರ್ಕಾರ 947 ಪಿ.ಎಸ್.ಐ ಹುದ್ದೆಗಳನ್ನು ಭರ್ತಿ ಮಾಡಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ತರಬೇತಿ ಪೂರ್ಣಗೊಂಡ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 42 ಪಿ.ಎಸ್.ಐ ಹುದ್ದೆಗಳ ಪೈಕಿ 32 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್ ಠಾಣೆಗಳಿದ್ದು, 1549 ಹುದ್ದೆಗಳಲ್ಲಿ 1394 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 155 ಹುದ್ದೆಗಳು ಖಾಲಿಯಿವೆ. ಪೊಲೀಸ್ ಠಾಣೆಗಳ ದಿನನಿತ್ಯದ ಕರ್ತವ್ಯಕ್ಕೆ ತೊಂದರೆಯಾಗದಂತೆ 103 ಗೃಹ ರಕ್ಷಕ ಸಿಬ್ಬಂದಿ ನೇಮಿಸಿಕೊಂಡು ಕರ್ತವ್ಯ ಭಾರವನ್ನು ಸರಿದೂಗಿಸಲಾಗಿದೆ ಎಂದರು.
ಮುಂಬರುವ ದಿನಗಳಲ್ಲಿ ಮಾನದಂಡಗಳನ್ನು ಆಧರಿಸಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಾಪಾಡಲು ಸ್ಪೆಷಲ್ ಆಕ್ಷನ್ ಪೋರ್ಸ್ ಶಿವಮೊಗ್ಗದಲ್ಲಿ ನಿಯೋಜಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಇದೇ ವೇಳೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಿಗಂಧೂರು ಉಪ ಪೊಲೀಸ್ ಠಾಣೆಯನ್ನು, ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು