4:06 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಸಚಿವ ಪೌರಾಡಳಿತ ಸಚಿವ ರಹೀಂ ಖಾನ್

16/12/2025, 14:47

ಬೆಳಗಾವಿ ಸುವರ್ಣ ವಿಧಾನಸೌಧ(reporterkarnataka.com): ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಹೇಳಿದರು.
ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಪ್ರತಾಪ್ ಸಿಂಹ ನಾಯಕ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿರುವ 187 ನಗರ ಸ್ಥಳೀಯ ಸಂಸ್ಥೆ (ಪಟ್ಟಣ ಪಂಚಾಯಿತಿ, ಪುರಸಭೆ ಮತ್ತು ನಗರಸಭೆ) ಗಳ ಐದು ವರ್ಷಗಳ ಕೌನ್ಸಿಲ್ ಅಧಿಕಾರವಧಿ ಮುಕ್ತಾಯಗೊಂಡಿರುತ್ತದೆ.
ಆದ್ದರಿಂದ ಸರ್ಕಾರದ ಅಧಿಸೂಚನೆ ಸಂ: ನಅಇ 287 ಎಂಎಲ್‍ಆರ್ 2025 ದಿನಾಂಕ 06.11.2025, 19.11.2025 ಹಾಗೂ 05.12.2025ರಲ್ಲಿ ಕರ್ನಾಟಕ ಪೌರಸಭೆಗಳ ಕಾಯ್ದೆ 1964 ರ ಕಲಂ 389 ರಲ್ಲಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ ಅವಧಿ ಮುಕ್ತಾಯಗೊಂಡಿರುವ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೂ ಅವುಗಳ ದಿನನಿತ್ಯದ ಕಾರ್ಯನಿರ್ವಹಣೆಗಾಗಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ಹಿತದೃಷ್ಟಿಯಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿರುತ್ತದೆ. ಈ ಮೂಲಕ ನಗರಸಭೆ, ಪುರಸಭೆ ಹಾಗು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಕ್ರಮವಹಿಸಲಾಗಿರುತ್ತದೆ.
ಆಡಳಿತಾಧಿಕಾರಿಗಳ ನೇಮಕ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಉಳ್ಳಾಲ, ಪುತ್ತೂರ, ಬಂಟ್ವಾಳ, ಮೂಡುಬಿದರೆ, ಬೆಳ್ತಂಗಡಿ, ಸುಳ್ಯ ಮತ್ತು ಮುಲ್ಕಿ ನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು