5:21 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ ಇಲಾಖೆ ಬಲೆಗೆ

17/12/2025, 10:37

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ಪ್ರಾದೇಶಿಕ ವಿಭಾಗದ ಭಾಗಮಂಡಲ ವಲಯ ಪಟ್ಟಿಘಾಟ್ ಮೀಸಲು ಅರಣ್ಯ ದಲ್ಲಿ ಅಕ್ರಮ ಬೇಟೆ ಗೆ ತೆರಳಿದ ಆರೋಪಿಗಳನ್ನು ಬಂದಿಸುವಲ್ಲಿ ಅರಣ್ಯ ಸಿಬ್ಬಂದಿ ಗಳು ಯಶಸ್ವಿ ಯಾಗಿದ್ದಾರೆ. ಕೊಡಗು ಅರಣ್ಯ ವ್ರತ್ತದ ಅರಣ್ಯ ಸಂರಕ್ಷಣಾ ಅಧಿಕಾರಿ ಸೋನಾಲು ವ್ರಶಿನಿ ಯವರಿಗೆ ಬಂದ ಖಚಿತ ಮಾಹಿತಿಯಂತೆ ಅವರ ಸೂಚನೇಯ ಮೇರೆಗೆ
ಮಡಿಕೇರಿ ಉಪ ವಿಭಾಗ ದ ಅರಣ್ಯ ಸಂರಕ್ಷಣಾ ಅಧಿಕಾರಿ ಅಭಿಷೇಕ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಸೆಂಥಿಲ್ ಕುಮಾರ್ ಮಾರ್ಗದ ರ್ಶನ ದಲ್ಲಿ ಭಾಗಮಂಡಲ ವಲಯ ಅರಣ್ಯ ಅಧಿಕಾರಿ ಶಂಕರ್ ಬಿ ಎಂ ರವರ ನಿರ್ದೇಶನದಲ್ಲಿ ಉಪ ವಲಯ ಅರಣ್ಯ ಅಧಿಕಾರಿಗಳಾದ ಸಿದ್ದಲಿಂಗಪ್ಪ ನೇತೃತ್ವ ದಲ್ಲಿ ಪಟ್ಟಿ ಘಾಟ್ ಮೀಸಲು ಅರಣ್ಯ ದಲ್ಲಿ ಅಳಿವಿನ ಅಂಚಿನಲ್ಲಿರುವ ಅಪರೂಪದ ಪ್ರಾಣಿ ಮೂಷಿಕ ಜಿಂಕೆ (ಬರಿಕ )ಬೇಟೆ ಯಾಡಿದ ಮಣಿವೇಲು ಅಲಿಯಾಸ್ ಜಾನ್ ಬೆಂಗೂರ್ ಗ್ರಾಮ, ಪ್ರಥ್ವಿನ್ ಬಿ ಡಿ ಸಿಂಗತೂರ್ ಗ್ರಾಮ, ಗಣೇಶ್ ಸಿ ಎಂ ಕೋಪಟ್ಟಿ ಗ್ರಾಮ ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕೆ ಒಪ್ಪಿಸಲಾಗಿದ್ದು, ಬಂಧಿತರಿಂದ ಒಂಟಿ ನಳಿಗೆ ಕೋವಿ ಹತ್ತು ತೋಟಗಳು ಗುಂಡೆಟಿ ನಿಂದ ಸತ್ತ ಒಂದು ಮುಷಿಕಾ ಜಿಂಕೆ, ಕತ್ತಿ ,ಮೊಬೈಲ್ ಫೋನ್ ಸೇರಿದಂತೆ ಇತರೆ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಕಾರ್ಯಚರಣೆ ಯಲ್ಲಿ ಉಪ ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ್ ವೊಡೆಯರ್ ಸೂರ್ಯ ಎಂ ಕೆ, ಅರಣ್ಯ ರಕ್ಷಕ ರಾದ ಕೆಂಪಣ್ಣ ಮ್ಯಾಳಗೊಳ, ಸಚಿನ್ ತಳವಾರ, ರವಿ ಓಡಿ ಹಾಗು ಸಿಬ್ಬಂದಿಗಳಾದ ದೇವಿ ಪ್ರಸಾದ್ ಹಾಗೂ ಜೀವಿತ್ ಕುಮಾರ್ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು