8:38 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರು ಜಿಲ್ಲಾ ಕಾರಾಗೃಹದ ಕೈದಿಗಳಿಗೆ 3 ದಿನಗಳ ಅಣಬೆ ಕೃಷಿ ತರಬೇತಿ ಕಾರ್ಯಕ್ರಮ

17/10/2026, 20:38

ಮಂಗಳೂರು(reporterkarnataka.com): ಕೈದಿಗಳ ಪುನರ್ವಸತಿ ಹಾಗೂ ಸ್ವಾವಲಂಬಿ ಬದುಕಿಗೆ ನೆರವಾಗುವ ಉದ್ದೇಶದಿಂದ ಪ್ರಿಸನ್ ಮಿನಿಸ್ಟ್ರಿ ಇಂಡಿಯಾ (ಪಿಎಂಐ) ಸಂಸ್ಥೆಯು ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಮಂಗಳೂರು ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಅ. 14ರಿಂದ 16ರವರೆಗೆ ಮೂರು ದಿನಗಳ ಅಣಬೆ ಕೃಷಿ ತರಬೇತಿ ಕಾರ್ಯಕ್ರಮ ಆಯೋಜಿಸಿತ್ತು.
ಕಾಸರಗೋಡಿನ ಪಾಂಡುರಂಗ ಮತ್ತು ಅವರ ತಂಡ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಅಣಬೆ ಕೃಷಿಯ ವಿಧಾನಗಳು ಹಾಗೂ ಅದರ ಮೂಲಕ ಸ್ವಾವಲಂಬಿ ಉದ್ಯೋಗ ಕಂಡುಕೊಳ್ಳುವ ಸಾಧ್ಯತೆಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು. ಸುಮಾರು 23 ಕೈದಿಗಳು ತರಬೇತಿ ಪಡೆದರು.
ಅ. 16ರಂದು ನಡೆದ ಸಮಾರೋಪ ಸಮಾರಂಭದಲ್ಲಿ ತರಬೇತಿಯಲ್ಲಿ ಭಾಗವಹಿಸಿದ ಕೈದಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಪಿಎಂಐ ಮಂಗಳೂರು ಘಟಕದ ಆಧ್ಯಾತ್ಮಿಕ ನಿರ್ದೇಶಕ ರೆ. ಫಾ. ಸ್ಟೀಫನ್ ಪೆರೇರಾ ಒಸಿಡಿ ಅಧ್ಯಕ್ಷತೆ ವಹಿಸಿದ್ದರು. ಕಾರಾಗೃಹದ ಅಧೀಕ್ಷಕ ಶರಣ ಬಸಪ್ಪ, ಸಹಾಯಕ ಅಧೀಕ್ಷಕ ಸಿದ್ದಪ್ಪ ಪಾಟೀಲ್, ಪಿಎಂಐ ಸಂಯೋಜಕ ಡೊನಾಲ್ಡ್ ಕೌಟಿನ್ಹೊ, ಕಾರ್ಯದರ್ಶಿ ಸಿಸ್ಟರ್ ಜ್ಯೋತ್ಸ್ನಾ ಎ.ಸಿ. ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಫಾ. ಸ್ಟೀಫನ್ ಪೆರೇರಾ, ಕೈದಿಗಳ ಸುಧಾರಣೆ ಮತ್ತು ಪುನರ್ವಸತಿಯಲ್ಲಿ ಕೌಶಲ್ಯಾಭಿವೃದ್ಧಿಯ ಮಹತ್ವವನ್ನು ವಿವರಿಸಿದರು. ಜೈಲಿನಲ್ಲಿರುವ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಇಂತಹ ತರಬೇತಿಗಳು ಸಹಕಾರಿಯಾಗುತ್ತವೆ. ಬಿಡುಗಡೆಯ ಬಳಿಕ ಕಲಿತ ಕೌಶಲ್ಯದ ಮೂಲಕ ಜೀವನೋಪಾಯ ಕಂಡುಕೊಂಡು, ಗೌರವಯುತವಾಗಿ ಸಮಾಜದ ಮುಖ್ಯವಾಹಿನಿಗೆ ಮರಳಲು ಸಾಧ್ಯವಾಗುತ್ತದೆ ಎಂದರು.
ಕಾರಾಗೃಹದ ಅಧೀಕ್ಷಕ ಶರಣ ಬಸಪ್ಪ ಮಾತನಾಡಿ, ಕೈದಿಗಳ ಹಿತದೃಷ್ಟಿಯಿಂದ ಇಂತಹ ಉಪಯುಕ್ತ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಪಿಎಂಐ ಸಂಸ್ಥೆಯನ್ನು ಶ್ಲಾಘಿಸಿದರು. ತರಬೇತಿಯಲ್ಲಿ ಕಲಿತ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕೈದಿಗಳಿಗೆ ಕರೆ ನೀಡಿದರು.
ಪಿಎಂಐ ಸಹಾಯಕ ಸಂಯೋಜಕ ಲಾರೆನ್ಸ್ ಕ್ರಾಸ್ತಾ ಕಾರ್ಯಕ್ರಮ ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು