9:20 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..!

29/11/2025, 17:29

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ತಾಲ್ಲೂಕಿನ ಕಲ್ಲಳ್ಳಿಯಲ್ಲಿ ವಿಳಾಸ ಕೇಳುವ ನೆಪದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರ ಕತ್ತಿನಿಂದ ಚಿನ್ನದ ಸರ ಏಗರಿಸಿದ ಘಟನೆ ನಡೆದಿದೆ. ಮಹಿಳೆ ಬಳಿ ಮಲ್ಲಳ್ಳಿ ಜಲಪಾತಕ್ಕೆ ತೆರಳುವ ದಾರಿ ವಿಚಾರಿಸಿದ ಬೈಕ್ ಸವಾರ ಕ್ಷಣ ಮಾತ್ರದಲ್ಲಿ 25 ಗ್ರಾಂ ಚಿನ್ನದ ಸರ ಏಗರಿಸಿ ತಂಬಲಗೇರಿ ರಸ್ತೆ ಕಡೆ ತೆರಳಿದ್ದಾನೆ.
ಘಟನೆ ಬಳಿಕ ಸೋಮವಾರಪೇಟೆ ಪೊಲೀಸರು ಬಿಸಲೆ ಮತ್ತು ಚಂಗಡಹಳ್ಳಿಯ ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಕಾರ್ಯಾಚರಣೆ ವೇಳೆ ಸೋಮವಾರಪೇಟೆ ತಾಲ್ಲೂಕಿನ ದೊಡ್ಡತೊಳೂರು ಗ್ರಾಮದ ಆದರ್ಶ್ ನನ್ನು ಬಂಧಿಸಲಾಗಿದೆ. ಆದರ್ಶ್ ಮಂಗಳೂರಿನಲ್ಲಿ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದು, ರಜೆಯ ಮೇಲೆ ಊರಿಗೆ ಬಂದು ಈ ಕೃತ್ಯ ನಡೆಸಿದ್ದಾನೆ. ಕಳುವು ಮಾಡಿದ ಸರವನ್ನು ಹಾಸನದಲ್ಲಿ ಅಡವು ಇಟ್ಟು ಹಣ ಪಡೆದಿದ್ದ, ಸದ್ಯ ಸರವನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು