ಇತ್ತೀಚಿನ ಸುದ್ದಿ
ಅಪ್ಪಟ ಹಳ್ಳಿ ಪ್ರತಿಭೆ ಗಿಲ್ಲಿ: ಬಿಗ್ ಬಾಸ್ ಗೆದ್ದ ನಟನನ್ನು ಅಭಿನಂದಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ
19/01/2026, 21:06
*ಮೊದಲ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಅವರನ್ನು ಅಭಿನಂದಿಸಿದ ಕೇಂದ್ರ ಸಚಿವರು*
ಬೆಂಗಳೂರು(reporterkarnataka.com): ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಗಿಲ್ಲಿ ನಟ ಎಂದೇ ಖ್ಯಾತಿಯಾಗಿರುವ ನಟರಾಜ್ ಅವರನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಭಿನಂದಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ (ನಟರಾಜ್) ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಹಳ್ಳಿಯ ರೈತನ ಮಗನಾಗಿ ಹುಟ್ಟಿ ಕನ್ನಡಿಗರೆಲ್ಲರ ಮನಗೆದ್ದಿರುವ ಅವರಿಗೆ ಇನ್ನೂ ಹೆಚ್ಚಿನ ಕೀರ್ತಿ, ಹೆಸರು ಬರಲಿ ಎಂದು ಶುಭ ಹಾರೈಸುತ್ತೇನೆ. ಹಾಗೆಯೇ, ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ ರಕ್ಷಿತಾ ಶೆಟ್ಟಿ ಅವರಿಗೂ ಅಭಿನಂದನೆಗಳು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












