5:00 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಪ್ಪಟ ಹಳ್ಳಿ ಪ್ರತಿಭೆ ಗಿಲ್ಲಿ: ಬಿಗ್ ಬಾಸ್ ಗೆದ್ದ ನಟನನ್ನು ಅಭಿನಂದಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

19/01/2026, 21:06

*ಮೊದಲ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಅವರನ್ನು ಅಭಿನಂದಿಸಿದ ಕೇಂದ್ರ ಸಚಿವರು*

ಬೆಂಗಳೂರು(reporterkarnataka.com)
: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಗಿಲ್ಲಿ ನಟ ಎಂದೇ ಖ್ಯಾತಿಯಾಗಿರುವ ನಟರಾಜ್ ಅವರನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಭಿನಂದಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ (ನಟರಾಜ್) ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಹಳ್ಳಿಯ ರೈತನ ಮಗನಾಗಿ ಹುಟ್ಟಿ ಕನ್ನಡಿಗರೆಲ್ಲರ ಮನಗೆದ್ದಿರುವ ಅವರಿಗೆ ಇನ್ನೂ ಹೆಚ್ಚಿನ ಕೀರ್ತಿ, ಹೆಸರು ಬರಲಿ ಎಂದು ಶುಭ ಹಾರೈಸುತ್ತೇನೆ. ಹಾಗೆಯೇ, ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ ರಕ್ಷಿತಾ ಶೆಟ್ಟಿ ಅವರಿಗೂ ಅಭಿನಂದನೆಗಳು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು