1:42 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಬಾಳೇಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ನಾಳೆ ಅದ್ದೂರಿ ದೀಪೋತ್ಸವ

21/11/2025, 19:05

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಪ್ರಸಿದ್ಧ ಐತಿಹಾಸಿಕ ದೇಗುಲವಾಗಿರುವ ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ನಾಳೆ
ಕಾರ್ತಿಕ ದೀಪೋತ್ಸವದ ಪ್ರಯುಕ್ತ 33ನೇ ವರ್ಷದ
ದೀಪೋತ್ಸವ ಅತ್ಯಂತ ವೈಭವದಿಂದ ನಡೆಯಲಿದೆ.
ಸುಮಾರು 1000 ಅಡಿ ಬೆಟ್ಟದ ಮೇಲಿರುವ ದೇಗುಲಕ್ಕೆ
ಸಾವಿರಾರು ಭಕ್ತರು ಆಗಮಿಸಲಿದ್ದು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

*ಪೂಜೆ, ದೀಪೋತ್ಸವ, ಅನ್ನ ಸಂತರ್ಪಣೆ !:*
ನಾಳೆ ಸಂಜೆ ಸ್ವಾಮಿಗೆ ರುದ್ರಭಿಷೇಕ, ವಿಶೇಷ ಅಲಂಕಾರ
ನಂತರ ಸಿದ್ದೇಶ್ವರ ಸ್ವಾಮಿಗೆ ಪೂಜೆ, ದೀಪೋತ್ಸವ ನೆಡೆಯಲಿದೆ ಹಾಗೂ ಆರೂಢ ಪ್ರಶ್ನೆಯಲ್ಲಿ ಬಂದಂತೆ ಅಗಸ್ತ್ಯ ಮಹರ್ಷಿಗಳು ತಪಗೈದ ಸ್ಥಳವಾದ್ದರಿಂದ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ಅಗಸ್ತ್ಯ ಮಹರ್ಷಿಗಳ ಗುರುಪೀಠ ಪೂಜೆ ನಡೆಯಲಿದೆ. ನಂತರ ಬಂದಿರುವ ಎಲ್ಲಾ ಭಕ್ತಾದಿಗಳಿಗೂ ಅನ್ನ ಸಂತರ್ಪಣೆ ನೆಡೆಯಲಿದೆ. ಆ ನಂತರ ವಿದ್ವಾನ್ ರಾಘವೇಂದ್ರ ಹೆಗ್ಗೋಡು ಮತ್ತು ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ನ. 23ರ ಸಂಜೆ 6:30ಕ್ಕೆ ಡ್ಯಾನ್ಸ್ ಪ್ಯಾಲೇಸ್ ತೀರ್ಥಹಳ್ಳಿ ಇವರ ಸಹಯೋಗದಲ್ಲಿ ಸಿದ್ದೇಶ್ವರ ಬೆಟ್ಟದ ತೆಪ್ಪಲಿನಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ನಡೆಯಲಿದೆ.
ನಿಸರ್ಗ ಮಾತೆಯ ಮುಡಿಯಲ್ಲಿರುವ ಸಿದ್ದೇಶ್ವರ ಬೆಟ್ಟದ
ತುದಿಯವರೆಗೆ ಜಗಮಗಿಸುವ ವಿದ್ಯುತ್ ದೀಪಾಲಂಕಾರ, ಸಿಡಿ ಮದ್ದಿನ ಜೇಂಕಾರದೊಂದಿಗೆ ಸ್ವಾಮಿಯ ದೀಪೋತ್ಸವ ವೀಕ್ಷಿಸಿ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಲು ಸಮಿತಿಯವರು ಈ ಮೂಲಕ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು