12:31 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ ರಿಸೆಪ್ಶನ್

07/04/2026, 19:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬಹುಭಾಷ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಜೋಡಿಯು ಕೊಡಗಿನ ವಿರಾಜಪೇಟೆಯಲ್ಲಿ ಅದ್ಧೂರಿ ಆರತಕ್ಷತೆ ಸಮಾರಂಭವನ್ನು ಆಯೋಜಿಸಿದೆ. ರಾಜಸ್ಥಾನದಲ್ಲಿ ನಡೆದ ಖಾಸಗಿ ವಿವಾಹದ ನಂತರ, ಮಂದಣ್ಣ ಕುಟುಂಬದ ಆಪ್ತರಿಗಾಗಿ ಕೊಡವ ಸಂಪ್ರದಾಯದೊಂದಿಗೆ ಈ ವಿಶೇಷ ರಿಸೆಪ್ಷನ್ ನಡೆಸಲಾಯಿತು. ವಿರಾಜಪೇಟೆಯ ಸುಂದರ ಪರಿಸರದಲ್ಲಿರುವ ‘ಸಿರಿನಿಟಿ ಹಾಲ್’ ನಲ್ಲಿ ಈ ತಾರಾ ಜೋಡಿಯ ರಿಸೆಪ್ಷನ್‌ಗೆ ಸಾಕ್ಷಿಯಾಗಿದೆ. ಕೊಡವ ಸಂಪ್ರದಾಯದ ಕೆಲವು ಮೆರುಗುಗಳೊಂದಿಗೆ ಈ ಸಮಾರಂಭ ನಡೆದಿದ್ದು, ಮಂದಣ್ಣ ಕುಟುಂಬಸ್ಥರು ತಮ್ಮ ಮನೆಮಗಳ ಮದುವೆಯ ಸಂಭ್ರಮವನ್ನು ಸಡಗರದಿಂದ ಆಚರಿಸಿದ್ದಾರೆ. ಸಭಾಂಗಣದ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.


ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ವಿವಾಹವು ರಾಜಸ್ಥಾನದ ಉದಯಪುರದಲ್ಲಿ ಗೌಪ್ಯ ವಾಗಿ ಸದ್ದಿಲ್ಲದೆ ನಡೆದ ಬೆನ್ನಲ್ಲೇ ಕೊಡಗಿನ ಅನೇಕ ಸಂಬಂಧಿಕರಿಗೆ ಹೋಗಲು ಸಾಧ್ಯವಾಗಿರದ ಕಾರಣ. ಮಂದಣ್ಣ ಕುಟುಂಬದವರು ತಮ್ಮ ಜಿಲ್ಲೆಯ ಹಾಗೂ ರಾಜ್ಯದ ಆಪ್ತರಿಗಾಗಿ ಮತ್ತು ಮಂದಣ್ಣ ಕುಟುಂಬದ ದೊಡ್ಡ ಬಳಗಕ್ಕಾಗಿ ಈ ವಿಶೇಷ ರಿಸೆಪ್ಷನ್ ಏರ್ಪಡಿಸಿದ್ದಾರೆ. ಮದುವೆಯಾಗಿ ಒಂದೂವರೆ ತಿಂಗಳ ನಂತರ ಈ ಕಾರ್ಯಕ್ರಮ ನಡೆಯುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು