ಇತ್ತೀಚಿನ ಸುದ್ದಿ
ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ
28/07/2025, 12:33
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@mail.com
ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ.


ಭಾರಿ ಮಳೆಗೆ ವಾಹನ ಓಡಿಸಲಾಗದೆ ಜೋಡುಪಾಲ 10th ಮೈಲು ಬಳಿಯಲ್ಲಿರುವ ಹೋಟೆಲ್ ಬಳಿ ನಿಲ್ಲಿಸಿದ್ದ ಸಂದರ್ಭ ಗಜರಾಜನ ಸವಾರಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ರಾತ್ರಿ ಹೊತ್ತಿನಲ್ಲಿ ಈ ಮಾರ್ಗ ಸವಾರರು ಎಚ್ಚರಿಕೆ ವಹಿಸಬೇಕು ಎನ್ನುವ ಸಂದೇಶ ನೀಡಿದೆ.
*ಮಳೆ ಆರ್ಭಟ – ಶಾಲಾ ಕಾಲೇಜು, ವಿವಿ ಪದವಿ ಕಾಲೇಜುಗಳಿಗೆ ರಜೆ ಮುಂದುವರಿಕೆ* ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜು ಆದೇಶಿಸಿದ್ದಾರೆ.ಇನ್ನುಕೊಡಗು ವಿಶ್ವವಿದ್ಯಾಲಯದ ಆವರಣದಲ್ಲಿರುವ ಹಾಗೂ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಘಟಕ, ಸರ್ಕಾರಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ಇಂದು ರಜೆ ನೀಡಿ ಕುಲಸಚಿವರು ಅದೇಶಿಸಿದ್ದಾರೆ.














